ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ (GT Mall) ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲೇ ಇಂದಿರಾ ಕ್ಯಾಂಟೀನ್ ಬಂದ್ – ಬೆಂಗಳೂರಲ್ಲಿ 15ಕ್ಕೂ ಹೆಚ್ಚು ಕ್ಯಾಂಟೀನ್‌ಗಳಿಗೆ ಬೀಗ
- Advertisement -
- Advertisement -
ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ
- Advertisement -
ಇದೇ ವೇಳೆ ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ. ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದರೆ, ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಒತ್ತಾಯಿಸಿದರು. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
- Advertisement -
ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು. ಒಟ್ಟಾರೆಯಾಗಿ ಇಡೀ ಸದನ ಮಾಲ್ ನಡವಳಿಕೆ ಖಂಡಿಸಿ ಆಕ್ರೋಶವನ್ನು ವ್ಯಕ್ತಪಡಿಸಿತು. ಆ ಬಳಿಕ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಣೆ ಮಾಡಿದರು. ಇದನ್ನೂ ಓದಿ: ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ