ದಾವಣಗೆರೆ: ಮಕ್ಕಳನ್ನು ಸರ್ಕಾರಿ ಶಾಲೆಗೆ (School) ಸೇರಿಸುವವರಿಗೆ ಮಾತ್ರ ಗ್ಯಾರಂಟಿ ಯೋಜನೆ (Guarantee scheme) ಕೊಡಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ (K.S Basavantappa) ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ದಾವಣಗೆರೆಯ (Davanagere) ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ಪೋಷಕರಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಿದರೆ ಮಾತ್ರ ಗ್ಯಾರಂಟಿ ಕೊಡ್ತಿವೆ ಎಂದು ಸರ್ಕಾರ ಘೊಷಿಸಬೇಕು. ಆಗ ಸರ್ಕಾರಿ ಶಾಲೆ ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಳ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಸಂಪುಟದ ಮುಂದಿಟ್ಟು ತಮಗೆ ಬೇಕಾದವ್ರ ಕೇಸ್ ತೆಗೆದು ಹಾಕಿದ್ದಾರೆ, ಬಿಜೆಪಿ ಇದನ್ನು ಒಪ್ಪಲ್ಲ: ರವಿಕುಮಾರ್
ಈ ವಿಚಾರವಾಗಿ ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ಈ ಕೆಲಸ ಮಾಡಿದರೆ ಸಾಕು, ಎಲ್ಲಿ 2000 ರೂ, ಹಣ, ವಿದ್ಯುತ್ ಬಿಲ್ ಕೈ ತಪ್ಪಿ ಹೋಗುತ್ತದೆ ಎಂಬ ಭಯ ಬರುತ್ತದೆ. ಭಯದಲ್ಲಾದರೂ ತಾಯಂದಿರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ.
ಯಾರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೋ ಅಂತಹವರಿಗೆ ಗ್ಯಾರಂಟಿ ಯೋಜನೆ ಮೊದಲ ಆದ್ಯತೆಯಾಗಲಿ. ಈ ಮೂಲಕ ಶಾಲೆಗಳು ಉಳಿದುಕೊಳ್ಳಲಿವೆ ಎಂದಿದ್ದಾರೆ. ಇದನ್ನೂ ಓದಿ: ಕಲಘಟಗಿಯ 107 ಕೆರೆಗಳಿಗೆ ಬೇಡ್ತಿ ನದಿ ನೀರು – 179.50 ಕೋಟಿ ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು