ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ (HM Revanna) ಹೇಳಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, 51 ಸಾವಿರ ಕೋಟಿ ಇಟ್ಟು ಗ್ಯಾರಂಟಿ ಯಶಸ್ವಿಯಾಗಿದೆ. 91% ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಲಂಚ ಇಲ್ಲದೆ ಯೋಜನೆಗಳ ಹಣ ನೇರ ವರ್ಗಾವಣೆ ಆಗಿದೆ. ಯಾರೆಲ್ಲ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್ ವೆಂಡರ್ ಅರೆಸ್ಟ್
ಗ್ಯಾರಂಟಿಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಮೃತರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಈ ಅಕೌಂಟ್‌ಗಳನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯುವನಿಧಿ ಕೂಡ ನಿಂತಿಲ್ಲ. ಬಿಜೆಪಿಗರು ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಅಂದ್ರು ಏನು ಮಾಡಿಲ್ಲ. ವಿದ್ಯಾರ್ಥಿಗಳಿಗೆ, ಯುವಕರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ರೇವಣ್ಣ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

