ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬೆನ್ನತ್ತಿ ಸರ್ಕಾರ (Government) ಬಳಿ ಹಣವಿಲ್ಲದ ಕಾರಣ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯ ಏಕೈಕ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ (Yoga & Nature Care Centre) ಮುಚ್ಚಲ್ಪಟ್ಟಿದೆ.
ಬೀಗ ಹಾಕಿರುವ ಆಸ್ಪತ್ರೆಯ ಎದುರು ಆಸ್ಪತ್ರೆಯನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿದ್ದ ಸರ್ಕಾರಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾಲಯದಲ್ಲಿ ಫಲಕ ಹಾಕಲಾಗಿದೆ. ಇದನ್ನೂ ಓದಿ: Ranji Trophy | 74 ವರ್ಷಗಳ ಬಳಿಕ ಮೈಲುಗಲ್ಲು – ಹೆಲ್ಮೆಟ್‌ನಿಂದ ರಣಜಿ ಫೈನಲ್ ತಲುಪಿದ ಕೇರಳ!
- Advertisement
ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಬಡ ರೋಗಿಗಳಿಗೆ ಆಯುಷ್ ಇಲಾಖೆಯಿಂದ ಉಚಿತವಾಗಿ ನ್ಯಾಚುರೋಪತಿ ಚಿಕಿತ್ಸೆ ನೀಡಲಾಗುತ್ತಿತ್ತು. ಸರ್ಕಾರದ ಬಳಿ ಹಣವಿಲ್ಲದ ಕಾರಣ ಆಸ್ಪತ್ರೆಯು ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಎಸ್‌ಡಿಎಂ ಸಂಸ್ಥೆಯ ಸಹಯೋಗದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿತ್ತು. ಆದರೆ ಈ ಬಾರಿ ಟೆಂಡರ್ ಪ್ರಕ್ರಿಯೆ ನಡೆಸದ ಕಾರಣ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ‘ವಸತಿ ಜಿಹಾದ್’: ಶಿವಸೇನಾ ನಾಯಕ ಆರೋಪ
- Advertisement
ಸಂಕೇಶ್ವರ ಪಟ್ಟಣದಲ್ಲಿರುವ ಈ ಆಸ್ಪತ್ರೆಗೆ ದಿನನಿತ್ಯ ಹುಕ್ಕೇರಿ ತಾಲೂಕು ಸೇರಿದಂತೆ ವಿವಿಧೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಓರ್ವ ಮುಖ್ಯ ವೈದ್ಯ ಸೇರಿದಂತೆ ನಾಲ್ಕು ಸಿಬ್ಬಂದಿಯಿಂದ ಬೆನ್ನು ನೋವು, ಸಂಧಿವಾತ ಸೇರಿದಂತೆ ವಿವಿಧ ಥೆರಪಿಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಅನೇಕ ಬಡ ರೋಗಿಗಳಿಗೆ ಅನುಕೂಲವಾಗುತ್ತಿತ್ತು. ಈ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸಾವಿರಾರು ರೂ. ಪಡೆಯುತ್ತಿದ್ದ ಕಾರಣ ಬಡ ರೋಗಿಗಳಿಗೆ ಈ ಆಸ್ಪತ್ರೆ ಸಾಕಷ್ಟು ಅನುಕೂಲ ಕಲ್ಪಿಸಿತ್ತು. ಇದನ್ನೂ ಓದಿ: 10 ದಿನಗಳ ಒಳಗೆ ನಿಗಮ ಮಂಡಳಿಗೆ ನಿರ್ದೇಶಕರ ನೇಮಕ: ಚಂದ್ರಶೇಖರ್
ಏಕಾಏಕಿ ಆಸ್ಪತ್ರೆಯನ್ನು ಬಂದ್ ಮಾಡಿರುವ ಕಾರಣ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಬಡವರಿಗೆ ಸಿಗುತ್ತಿದ್ದ ಇಂಥ ಸೇವೆಗಳನ್ನು ಪುನರಾರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಭೆ ಬಳಿಕ ವಿಧಾನಸೌಧದಲ್ಲೇ ಎರಡು ಬಾರ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳ ನಡುವೆ ಗಲಾಟೆ