ತುಮಕೂರು: ಜೆಡಿಎಸ್ (JDS) ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ (SR Srinivas) ಅವರು ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಜೆಡಿಎಸ್ ಜೊತೆಗಿನ 20 ವರ್ಷಗಳ ಬಾಂಧವ್ಯವನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್
Advertisement
Advertisement
ರಾಜೀನಾಮೆ ಪತ್ರ ಸಲ್ಲಿಸುವುದಕ್ಕೂ ಮುನ್ನ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದ ಶ್ರೀನಿವಾಸ್, ಮಹತ್ವದ ಚರ್ಚೆ ನಡೆಸಿ ಮಾರ್ಚ್ 31ರಂದು ಕಾಂಗ್ರೆಸ್ (Congress) ಸೇರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!
Advertisement
ಇನ್ನೂ ಮಾಜಿ ಸಂಸದ ಮಂಜುನಾಥ್ ಕುನ್ನೂರ ತಮ್ಮ ಪುತ್ರನೊಂದಿಗೆ ಬಿಜೆಪಿ (BJP) ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಮಂಜುನಾಥ್ ಕುನ್ನೂರ ಶಿಗ್ಗಾಂವಿಯ ಪ್ರಬಲ ಪಂಚಮಸಾಲಿ ಮುಖಂಡರಾಗಿದ್ದಾರೆ. ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿಗೆ ಈ ಬಾರಿ ಗೆಲುವು ಸುಲಭ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.
Advertisement
ಇತ್ತ ಕೆಆರ್ ಪೇಟೆಯ ಜೆಡಿಎಸ್ ಮುಖಂಡ ಬಿ.ಎಲ್ ದೇವರಾಜು ಕೂಡ ಕಾಂಗ್ರೆಸ್ ಪಾಳಯಕ್ಕೆ ಜಂಪ್ ಆಗಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಸುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಟಿಕೆಟ್ ಕೈತಪ್ಪಿದ ಕಾರಣ ಬೀದರ್ ದಕ್ಷಿಣ ಕ್ಷೇತ್ರದ ಚಂದ್ರಾಸಿಂಗ್ ರೆಬೆಲ್ ಆಗಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಿ ಬಂಡಾಯ ಸ್ಪರ್ಧೆ ಮಾಡೋ ಘೋಷಣೆ ಮಾಡಿದ್ದಾರೆ.