ಕಲಬುರಗಿ: ವಿದ್ಯಾರ್ಥಿನಿಯರು (Students) ಮತ್ತು ಅತಿಥಿ ಶಿಕ್ಷಕಿಗೆ (Teacher) ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ (Headmaster In Charge) ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಮೈ ಮುಟ್ಟುವುದು ಮಾಡುತ್ತಿದ್ದ. ನಾನು ನಿಮ್ಮ ಸೋದರ ಮಾವ, ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತೆ ಹೇಳುತ್ತಿದ್ದ. ಅತಿಥಿ ಶಿಕ್ಷಕಿಗೂ ಆತ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಮರ್ಡರ್ – ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳ ಬಂಧನ
ಈ ಬಗ್ಗೆ ವಿದ್ಯಾರ್ಥಿನಿಯರು ಬಿಇಒಗೆ ದೂರು ನೀಡಿದ್ದರು. ಚಿತ್ತಾಪುರ ಬಿಇಒ ರಿಂದ ವಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ಯ ಆರೋಪಿ ಪ್ರಭಾರಿ ಮುಖ್ಯೋಪಾಧ್ಯಾಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ – ಬೆಂಗ್ಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]