– ಅಕ್ರಮ ಚಟುವಟಿಕೆ, ಗೂಂಡಾಗಿರಿ ಮಾಡುವವರ ವಿರುದ್ಧ ಕ್ರಮ
-20,000 ಪೊಲೀಸರ ನಿಯೋಜನೆ, 50ಕ್ಕೂ ಹೆಚ್ಚು ಮೇಲ್ಸೇತುವೆ ಬಂದ್
-ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ, ಪರ್ಯಾಯ ಮಾರ್ಗಗಳ ವ್ಯವಸ್ಥೆ
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಬೆಂಗಳೂರಿನಲ್ಲಿ (Bengaluru) ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ 10 ಲಕ್ಷ ಮಂದಿ ಭಾಗಿಯಾಗುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ನಗರದ ಪ್ರಮುಖ ಸ್ಥಳಗಳಾದ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ.ರೋಡ್, ಇಂದಿರಾ ನಗರ, ನೀಲಾದ್ರಿ ರೋಡ್, ಹೆಚ್‌ಎಸ್‌ಆರ್ ಲೇಔಟ್, ಕೋರಮಂಗಲ, ಬಾಣಸವಾಡಿ ಭಾಗದಲ್ಲಿ ಲಕ್ಷ ಲಕ್ಷ ಮಂದಿ ಸೇರಿ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ಈ ಹಿನ್ನೆಲೆ ಪೊಲೀಸರು ಮುಂಜಾಗೃತ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ದೊಡ್ಡಮಟ್ಟದಲ್ಲಿ ಭದ್ರತೆ ಮಾಡಿಕೊಳ್ಳುತ್ತಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡಲು, ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮ:
- ಅಕ್ರಮ ಚಟುವಟಿಕೆ, ಗಲಾಟೆ, ಗೂಂಡಾಗಿರಿ, ಮದ್ಯಪಾನ ಮಾಡಿ, ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವವರ ಮೇಲೆ ಕಾನೂನು ಕ್ರಮ
- ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ವರ್ತನೆ, ಶಬ್ದ ಮಾಲಿನ್ಯ, ಅಪಾಯಕಾರಿ ಸ್ಟಂಟ್, ಅಕ್ರಮ ಪಾರ್ಟಿ ಮಾಡುವಂತಿಲ್ಲ.
- ಹೋಟೆಲ್, ಪಬ್, ಕ್ಲಬ್, ರೆಸಾರ್ಟ್‌ಗಳಿಗೆ ನಿಗದಿತ ಸಮಯದ ಮಿತಿ ವಿಧಿಸಲಾಗಿದೆ.
ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಹಾಗೂ ಸಮಯ ಮಿತಿ ಕಡ್ಡಾಯ. - ಮದ್ಯಪಾನ ಮಾಡಿ, ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ದಂಡ ಹಾಗೂ ಪ್ರಕರಣ ದಾಖಲು
- ಮಹಿಳೆಯರ ಸುರಕ್ಷತೆಗೆ ವಿಶೇಷ ಗಮನ ನೀಡಿ ಪೆಟ್ರೋಲಿಂಗ್ ಹೆಚ್ಚಳ
- CCTV, ಡ್ರೋನ್, ಇತರೆ ತಾಂತ್ರಿಕ ಸಾಧನಗಳ ಮೂಲಕ ನಿಗಾ
- ಯಾವುದೇ ಅಹಿತಕರ ಘಟನೆ ನಡೆದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಸೂಚನೆ.
ಭದ್ರತೆಗಾಗಿ 20,000 ಪೊಲೀಸರ ನಿಯೋಜನೆ
- ಫೋಲಿಸ್ ಕಂಟ್ರೋಲ್ ರೂಂ – 4
- ವಾಚ್ ಟವರ್‌ಗಳು – 78
- ಮಹಿಳಾ ಸಹಾಯ ಕೇಂದ್ರ – 164
- ಅಂಬ್ಯುಲೆನ್ಸ್‌ಗಳು – 46
- ಅಗ್ನಿಶಾಮಕ ವಾಹನಗಳು – 55
- ಅಗ್ನಿಶಾಮಕ ಸಿಬ್ಬಂದಿ – 37
- ಸಿವಿಲ್ ಪೊಲೀಸ್ – 10,122
- ಸಂಚಾರ ಪೊಲೀಸ್ – 2,436
- ಕ್ವಿಕ್ ಆಕ್ಷನ್ ಪಡೆಗಳು (88 ಪ್ಲಟೂನ್ ) – 1,936
- ಸಿ.ಎ.ಆರ್ ಪಡೆಗಳು (21 ಪ್ಲಟೂನ್ ) – 168
- ಹೋಮ್ ಗಾರ್ಡ್‌ಗಳು – 3,341
- ಸಿವಿಲ್ ಡಿಫೆನ್ಸ್ – 916
- ಟ್ರಾಫಿಕ್ ವಾರ್ಡನ್ – 400
- ಸಿ-ಸ್ವಾಟ್ – 4
- ಕಮಾಂಡೋ ಟೀಂ – 3
- ವಾಟರ್ ಜೆಟ್ – 2
- ಕುದುರೆ – 246
- ಶ್ವಾನ ದಳ – 249
ಸಂಭ್ರಮಾಚರಣೆ ಬಳಿಕ ಕುಡಿದು ವಾಹನ ಚಾಲನೆ ಹಾಗೂ ವಿಲ್ಹಿಂಗ್ ಮಾಡುತ್ತಾರೆ. ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳಾಗಿ ಸಾವು ನೋವುಗಳಾಗುತ್ತವೆ. ಹೀಗಾಗಿ 2025 ಡಿ.31ರ ರಾತ್ರಿ 11 ಗಂಟೆಯಿಂದ 2026 ಜ.1ರ ಬೆಳಿಗ್ಗೆ 6ರವರೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆಯನ್ನು ಹೊರತುಪಡಿಸಿ, ಬೆಂಗಳೂರು ನಗರದ 50ಕ್ಕೂ ಹೆಚ್ಚು ಮೇಲ್ಸೇತುವೆಗಳನ್ನು ಬಂದ್ ಮಾಡಲಾಗಿರುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ಸೇತುವೆ ಮೇಲೆ ಬೈಕ್‌ಗಳ ಸಂಚಾರ ನಿಷೇಧಿಸಲಾಗಿರುತ್ತದೆ.
ಸಂಭ್ರಮಾಚರಣೆ ಸ್ಥಳದ ಸುತ್ತಮುತ್ತ ಡಿ.31ರ ರಾತ್ರಿ 8ರಿಂದ ಮಧ್ಯರಾತ್ರಿ 2ರವರೆಗೆ ವಾಹನ ಸಂಚಾರಕ್ಕೆ ಬ್ರೇಕ್:
- ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆಸ್ಸಿ ರಸ್ತೆ ಜಂಕ್ಷನ್‌ವರೆಗೆ.
- ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ.
- ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ.
- ರೆಸಿಡೆನ್ಸಿ ರಸ್ತೆ, ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್‌ವರೆಗೆ.
- ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್ ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ) ವೃತ್ತದ ವರೆಗೆ.
- ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‌ವರೆಗೆ.
- ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ ರಸ್ತೆ ಜಂಕ್ಷನ್‌ವರೆಗೆ (ಶಂಕರ್ ನಾಗ್ ಚಿತ್ರಮಂದಿರವರೆಗೆ) ವಾಹನ ಸಂಚಾರ ನಿಷೇಧ ಮಾಡಲಾಗಿದೆ. ವಾಹನ ಸಂಚಾರಕ್ಕೆ ಹಾಗೂ ಪಾರ್ಕಿಂಗ್‌ಗೆ ಪರ್ಯಾಯ ಸ್ಥಳಗಳ ನಿಯೋಜನೆ ಮಾಡಲಾಗಿದೆ. ಜೊತೆಗೆ ದೆಹಲಿ ಸ್ಫೋಟದಿಂದ ಎಚ್ಚೆತ್ತಿರೋ ಪೊಲೀಸರು ಈ ವೇಳೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್‌ಗಳು ಕೆಲಸ ಮಾಡಲಿವೆ.
ಸಂಭ್ರಮಾಚರಣೆ ಸ್ಥಳದ ಸುತ್ತಮುತ್ತ ಡಿ.31ರ ರಾತ್ರಿ 8ರಿಂದ ಮಧ್ಯರಾತ್ರಿ 2ರವರೆಗೆ ಪಾರ್ಕಿಂಗ್ ನಿಷೇಧ:
- ಎಂ.ಜಿ ರಸ್ತೆಯಲ್ಲಿ, ಅನಿಲ್ ಕುಂಬ್ಳೆ ವೃತದಿಂದ ಟ್ರಿನಿಟಿ ವೃತ್ತದವರೆಗೆ.
- ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಲ್ಡ ಪಿ,ಎಸ್ ಜಂಕ್ಷನ್‌ವರೆಗೆ.
- ಚರ್ಚ್ ಸ್ಟ್ರೀಟ್‌ನಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಸೆಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್‌ವರೆಗೆ.
- ರೆಸ್ಟ್ ಹೌಸ್ ರಸ್ತೆಯಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ.
- ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆ ಜಂಕ್ಷನ್‌ನಿಂದ ಎಸ್.ಬಿ.ಐ ವೃತ್ತದವರೆಗೆ.
- ರೆಸಿಡೆನ್ಸಿ ರಸ್ತೆ, ಆಶೀರ್ವಾದಮ್ ಜಂಕ್ಷನ್ ನಿಂದ ಮೆಯೋ ಹಾಲ್ ಜಂಕ್ಷನ್‌ವರೆಗೆ
ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ:
- ಡಿ.31ರ ರಾತ್ರಿ 8 ಗಂಟೆಯಿಂದ ನಂತರ ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಮುಂದಕ್ಕೆ ಹೋಗುವಂತಹ ವಾಹನ ಚಾಲಕರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟಿಟ್-ಬಿ,ಆರ್,ವಿ ಜಂಕ್ಷನ್, ಬಲ ತಿರುವು ಕಬ್ಬನ್ ರಸ್ತೆ ಮೂಲಕ ಸಂಚರಿಸಿ ವೆಬ್ಸ್ ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
- ಹಲಸೂರು ಕಡೆಯಿಂದ ಕಂಟೊನ್ಮೆಂಟ್ ಕಡೆಗೆ ಹೋಗುವಂತಹ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ-ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗುವುದು. ಕಾಮರಾಜ್ ರಸ್ತೆಯಲ್ಲಿ, ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟಿಟ್‌ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
- ಈಜಿಪುರ. ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲತಿರುವು ಪಡೆದು, ಎ.ಎಸ್.ಸಿ.s ಸೆಂಟರ್‌ನಲ್ಲಿ ಎಡತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗುವುದು. ಹೆಚ್.ಎ.ಎಲ್. ಕಡೆಯಿಂದ ಬರುವ ವಾಹನಗಳು ಎ.ಎಸ್.ಸಿ ಸೆಂಟರ್‌ನಲ್ಲಿ ಬಲತಿರುವು ಪಡೆದು ಟ್ರಿನಿಟಿಮೂಲಕ ಮುಂದೆ ಸಾಗುವುದು.
- ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ ರಸ್ತೆ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್ ಕಡೆಗೆ ಕಾಲ್ನಡಿಗೆಯಲ್ಲಿ ಮಾತ್ರ ಹೋಗುವುದು. ವಿರುದ್ಧ ದಿಕ್ಕಿನಲ್ಲಿ ಹೋಗುವುದನ್ನು ನಿಷೇಧಿಸಲಾಗಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ & ಸೆಂಟ್ ಮಾರ್ಕ್ಸ್ ರಸ್ತೆಗಳಲ್ಲಿ ನಿಲ್ಲಿಸಿದಂತಹ ವಾಹನಗಳ ಚಾಲಕರು/ಮಾಲೀಕರು ತಮ್ಮ ವಾಹನಗಳನ್ನು ಡಿ.31ರ ಸಂಜೆ 4 ಗಂಟೆಯೊಳಗೆ ತೆರುವುಗೊಳಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು
ಪಾರ್ಕಿಂಗ್ ವ್ಯವಸ್ಥೆ:
- ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್‌ನ 1ನೇ ಮಹಡಿ
- ಯು.ಬಿ.ಸಿಟಿ ಗರುಡಾ ಮಾಲ್
- ಕಾಮರಾಜ್ ರಸ್ತೆ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ)

