ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ.
ಕಾರ್ಡ್ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ.
ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇದನ್ನೂ ಓದಿ: ಬಾಡಿಗೆದಾರರೇ ನಿಮಗೆ ಉಚಿತ ವಿದ್ಯುತ್ ಬೇಕೇ – ಷರತ್ತುಗಳನ್ನು ಪೂರ್ಣಗೊಳಿಸಿದ್ರೆ ಮಾತ್ರ ಫ್ರೀ
ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಯಜಮಾನಿ ಅಥವಾ ಪತಿ ಜಿಎಸ್ಟಿ ರಿಟರ್ನ್ ಸಲ್ಲಿಸುವವರರಾಗಿದ್ದಲ್ಲಿ ಈ ಯೋಜನೆಯ ಲಾಭ ಸಿಗುವುದಿಲ್ಲ.
ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾರ್ಗಸೂಚಿ ಎಚ್ಚರಿಕೆಯನ್ನು ನೀಡಲಾಗಿದೆ.