ಗಾಂಧಿನಗರ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ಗುಜರಾತ್ ವಿಧಾನಸಭೆ (Gujarat Assembly) ಗುರುವಾರ ಅಂಗೀಕರಿಸಿದೆ.
ಗೃಹಖಾತೆ ಸಚಿವ ಹರ್ಷ್ ಸಂಘವಿ ಗುಜರಾತ್ ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ)-2023 ಮಸೂದೆಯನ್ನು ಮಂಡಿಸಿದ್ದರು. ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (Leaking Question Papers) ಮಾಡುವ ಸಂಘಟಿತ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದರೆ ಗರಿಷ್ಟ 10 ವರ್ಷಗಳ ಜೈಲುಶಿಕ್ಷೆ ಹಾಗೂ 1 ಕೋಟಿ ರೂ. ದಂಡ ವಿಧಿಸಲು ಅವಕಾಶವಿದೆ.
ಅಪರಾಧಿಗಳು ಅನ್ಯಾಯವಾಗಿ ಗಳಿಸಿದ ಹಣವನ್ನು ವಸೂಲಿ ಮಾಡಲು ಅವರ ಆಸ್ತಿಯನ್ನು ಹರಾಜು ಹಾಕಲು ಈ ಮಸೂದೆಯಲ್ಲಿ ಅವಕಾಶವಿದೆ. ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ
ಕಳೆದೆರಡು ವರ್ಷಗಳಲ್ಲಿ ಗುಜರಾತ್‍ನಲ್ಲಿ ವಿವಿಧ ಸರ್ಕಾರಿ ಹುದ್ದೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಕಳೆದ ವರ್ಷ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ತೊಡಗಿಕೊಂಡಿರುವ ಅಂತರಾಜ್ಯ ಗ್ಯಾಂಗ್ ಒಂದನ್ನು ಪೊಲೀಸರು ಭೇದಿಸಿ ಹಲವಾರು ಸದಸ್ಯರನ್ನು ಜೈಲಿಗೆ ಕಳುಹಿಸಿದ್ದರು.
ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಎತ್ತಿದ ಹಲವಾರು ಪ್ರಮುಖ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯೂ ಪ್ರಮುಖವಾಗಿತ್ತು.
ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳನ್ನು ಮೂರು ವರ್ಷಗಳ ಕಾಲ ಡಿಬಾರ್ ಮಾಡುವ ಅವಕಾಶವೂ ಈ ಮಸೂದೆಯಲ್ಲಿದೆ. ಪರೀಕ್ಷೆಯನ್ನು ನಡೆಸುವ ಪರೀಕ್ಷಕರು ಈ ದಂಧೆಯಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಜೈಲುಶಿಕ್ಷೆ ಹಾಗೂ ದಂಡವನ್ನು ಪಾವತಿಸಬೇಕಾಗುತ್ತದೆ.
ಈ ಮಸೂದೆಯಲ್ಲಿ ಹಲವಾರು ದೋಷಗಳಿವೆ ಎಂದು ಗುಜರಾತಿನ ಕಾಂಗ್ರೆಸ್ ನಾಯಕ ಅರ್ಜುನ್ ಮೋದ್ವಾಡಿಯಾ ಆರೋಪಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k