ಗಾಂಧೀನಗರ: ಗುಜರಾತ್ ವಿಧಾನಸಭಾ ಚುನಾವಣೆಯ (Gujarat Assembly Polls) 2ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ, ಶತಾಯುಷಿ ಹೀರಾಬೆನ್ (Heeraben) ಅವರು ಮತದಾನ ಮಾಡಿದರು.
ಗಾಂಧೀನಗರ ಸಮೀಪದ ರೇಸನ್ ಗ್ರಾಮದ ಮತಗಟ್ಟೆಯಲ್ಲಿ ಮೋದಿ ತಾಯಿ ತಮ್ಮ ಹಕ್ಕು ಚಲಾಯಿಸಿದರು. ಜೂನ್‌ನಲ್ಲಿ 100ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರ ತಾಯಿ, ತಮ್ಮ ಕಿರಿಯ ಮಗ ಪಂಕಜ್ ಮೋದಿಯೊಂದಿಗೆ ಗಾಂಧಿನಗರ ನಗರದ ರೇಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಗುಜರಾತ್ ಚುನಾವಣೆ – ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ ಮೋದಿ
Advertisement
Prime Minister Narendra Modi's mother Heeraben Modi casts her vote for the second phase of #GujaratAssemblyPolls in Raysan Primary School, Gandhinagar pic.twitter.com/ZfWcBXWCfI
— ANI (@ANI) December 5, 2022
Advertisement
ಪಂಕಜ್ ಮೋದಿ ಮತ್ತು ಕುಟುಂಬದ ಇತರೆ ಸದಸ್ಯರ ಸಹಾಯದಿಂದ ಮೋದಿ ತಾಯಿ ಗಾಲಿಕುರ್ಚಿಯಲ್ಲಿ ಮತಗಟ್ಟೆಗೆ ತಲುಪಿ ಮತದಾನ ಮಾಡಿದರು. ಮತದಾನಕ್ಕೂ ಮುನ್ನಾದಿನ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಭಾನುವಾರ ಸಂಜೆ ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಪ್ರಧಾನಿ ಮೋದಿ ಅವರು ಸಹ ಇಂದು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.
Advertisement
2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಎಎಪಿ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್ 90 ಕ್ಷೇತ್ರದಲ್ಲಿ ಕಣದಲ್ಲಿದೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ
Advertisement
2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಡಿಸೆಂಬರ್ 8ರಂದ ಮತ ಎಣಿಕೆ ನಡೆಯಲಿದೆ.