– ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟ
– 38 ಮಂದಿಗೆ ಗಲ್ಲು ಶಿಕ್ಷೆ, 11 ಮಂದಿಗೆ ಜೀವಾವಧಿ ಶಿಕ್ಷೆ
ಅಹಮದಾಬಾದ್: ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲೆಂದೇ ಉಗ್ರರು ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ ಮಾಡಿದ್ದರು ಎಂಬ ವಿಚಾರ ಕೋರ್ಟ್ ತೀರ್ಪಿನಲ್ಲಿ ಪ್ರಸ್ತಾಪವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು. ಇತರೇ ಸ್ಥಳಗಳಲ್ಲಿ ನಡೆದ ಸ್ಫೋಟದಲ್ಲಿ ಮೃತಪಟ್ಟವರನ್ನು ಮತ್ತು ಗಾಯಗೊಂಡವರನ್ನು ನೋಡಲು ಮೋದಿ ಆಸ್ಪತ್ರೆಗೆ ಭೇಟಿ ನೀಡಿಯೇ ನೀಡುತ್ತಾರೆ ಎನ್ನುವುದು ಉಗ್ರರಿಗೆ ಗೊತ್ತಿತ್ತು. ಈ ಕಾರಣಕ್ಕೆ ಮೋದಿ ಹತ್ಯೆಗೆ ಆಸ್ಪತ್ರೆಗಳೇ ಸೂಕ್ತ ಸ್ಥಾನ ಎಂಬ ನಿರ್ಧಾರಕ್ಕೆ ಬಂದಿದ್ದ ಉಗ್ರರು ಆಸ್ಪತ್ರೆಗಳನ್ನು ಗುರಿಯಾಗಿಸಿ ಕೃತ್ಯ ಎಸಗಿದ್ದರು ಎಂಬ ಅಂಶ ತೀರ್ಪಿನಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದೆ.
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ 164 ಮಂದಿ ಹೇಳಿಕೆ ನೀಡಿದ್ದು, ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯನ್ನು ನಿಷೇಧ ಮಾಡಿದ್ದಕ್ಕೆ ಸಾಮೂಹಿಕ ಹತ್ಯೆ ಎಸಗಲು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್
Advertisement
Advertisement
38 ಉಗ್ರರಿಗೆ ಗಲ್ಲು ಶಿಕ್ಷೆ:
ಗುಜರಾತಿನ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿ 56 ಮಂದಿಯನ್ನು ಬಲಿ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ 38 ಮಂದಿಗೆ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದರೆ 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.
Advertisement
ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಬಣ್ಣಿಸಿರುವ ಕೋರ್ಟ್ ತನ್ನ 7 ಸಾವಿರ ಪುಟಗಳ ತೀರ್ಪಿನಲ್ಲಿ 38 ಜನರನ್ನು ಸಾಯುವವರೆಗೂ ನೇಣಿಗೇರಿಸಬೇಕು ಮತ್ತು 11 ಜನರು ಅಜೀವ ಜೀವಾವಧಿ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಹಿಜಬ್ ತೆಗೆದು ರೀಲ್ಸ್ ಹಾಕ್ತಾರೆ, ಈಗ ತೆಗೆಯೋಕಾಗಲ್ವಾ..?- ವಿದ್ಯಾರ್ಥಿಗಳು
48 ಮಂದಿಗೆ ಒಟ್ಟು 2.85 ಲಕ್ಷ ರೂ. ಮತ್ತು ಓರ್ವ ದೋಷಿಗೆ 2.88 ಲಕ್ಷ ರೂ. ಘಟನೆಯಲ್ಲಿ ಮಡಿದವರಿಗೆ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಮತ್ತು ಸಾಮಾನ್ಯ ಗಾಯಕ್ಕೆ ತುತ್ತಾದವರಿಗೆ ತಲಾ 25 ಸಾವಿರ ರೂ. ಪರಿಹಾರವನ್ನು ನ್ಯಾಯಾಲಯ ಪ್ರಕಟಿಸಿದೆ.
ಅಹಮದಾಬಾದ್ ಕ್ರೈಂ ಬ್ರಾಂಚ್‌ನ ಅಧಿಕಾರಿಗಳ ತಂಡ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿತ್ತು ತರದ ದಿನಗಳಲ್ಲಿ ಒಟ್ಟು 9 ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದರು. ಈ ಪೈಕಿ 2017ರಲ್ಲಿ ವಿಚಾರಣೆ ಹೊಣೆ ವಹಿಸಿಕೊಂಡ ನ್ಯಾ.ಎ.ಆರ್.ಪಟೇಲ್ ಇದೀಗ ತೀರ್ಪು ಪ್ರಕಟಿಸಿದ್ದಾರೆ.
ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. 2002ರ ಗೋಧ್ರೋತ್ತರ ದಂಗೆಗೆ ಪ್ರತಿಯಾಗಿ ಈ ದಾಳಿಯನ್ನು ನಡೆಸಿದ್ದೇವೆ ಎಂದು ದೋಷಿಗಳು ವಿಚಾರಣೆ ವೇಳೆ ಹೇಳಿಕೊಂಡಿದ್ದರು.