ಅಹಮದಾಬಾದ್: ಗುಜರಾತ್‍ನಲ್ಲಿ ಗೋಹತ್ಯೆಗೆ ಇದ್ದ ಶಿಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಗೋಹತ್ಯೆಗೆ ಜೀವಾವಧಿ ಶಿಕ್ಷೆ ನೀಡುವಂತೆ ತಿದ್ದುಪಡಿ ಮಸೂದೆಯನ್ನು ಇಂದು ಗುಜರಾತ್ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಗುಜರಾತ್ ಗೋಹತ್ಯೆಗೆ ದೇಶದಲ್ಲೇ ಅತ್ಯಂತ ಕಠಿಣ ಶಿಕ್ಷೆ ನೀಡುವ ರಾಜ್ಯವಾಗಿದೆ.
1954ರ ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಗೋವುಗಳ ಅಕ್ರಮ ಸಾಗಣೆಗೆ 10 ವರ್ಷ ಜೈಲು ಶಿಕ್ಷೆ ಇತ್ತು. 2011ರಲ್ಲಿ ಇದಕ್ಕೆ ತಿದ್ದುಪಡಿ ತಂದು ಗೋಹತ್ಯೆ ಅಪರಾಧಕ್ಕೆ ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷಗಳ ಶಿಕ್ಷೆ ಹಾಗೂ 50 ಸಾವಿರ ರೂ. ದಂಡವನ್ನು ನಿಗದಿಪಡಿಸಲಾಗಿತ್ತು.
Advertisement
ಆದರೆ ಇನ್ಮುಂದೆ ಗೋಹತ್ಯೆಗೆ ಜೀವಾವಧಿ ಶಿಕ್ಷೆ ವಿಧಿಸಲು ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಅಲ್ಲದೆ ಗೋಮಾಂಸ ಹೊಂದಿದವರು ಸಿಕ್ಕಿಬಿದ್ದರೆ 1 ಲಕ್ಷ ರೂ. ನಿಂದ 5 ಲಕ್ಷ ರೂ.ವರೆಗೆ ದಂಡ ಹಾಗೂ 10 ವರ್ಷಗಳ ಶಿಕ್ಷೆ ವಿಧಿಸಲಾಗುತ್ತದೆ. ಹಾಗೂ ಇದು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲಾಗುತ್ತದೆ.
Advertisement
ಕಳೆದ ಕೆಲವು ವಾರಗಳಿಂದ ಮುಖ್ಯಮಂತ್ರಿ ವಿಜಯ್ ರೂಪಾನಿ, ಗೋವುಗಳ ಸಂರಕ್ಷಣೆಗೆ ಕಠಿಣ ಕಾನೂನು ತರಬೇಕೆಂದು ಮಾತನಾಡಿದ್ದರು.
Advertisement
2011ರಲ್ಲಿ ನರೇಂದ್ರ ಮೋದಿ ಅಧಿಕಾರಿದಲ್ಲಿದ್ದಾಗ ಗುಜರಾತ್‍ನಲ್ಲಿ ಗೋವುಗಳ ಕಳ್ಳಸಾಗಣೆ ಮತ್ತು ಗೋಹತ್ಯೆಯನ್ನು ನಿಷೇಧಿಸಲಾಗಿತ್ತು.