ಗಾಂಧೀನಗರ: ಬಿಜೆಪಿ (BJP) ಅಧಿಕಾರಕ್ಕೆ ಬಂದಲ್ಲಿ ಮುಂದಿನ ಐದು ವರ್ಷದಲ್ಲಿ 20 ಲಕ್ಷ ಉದ್ಯೋಗಗಳು ಸೃಷ್ಟಿಸಿ, ರಾಜ್ಯದ ಆರ್ಥಿಕತೆಯನ್ನು ಒಂದು ಟ್ರಿಲಿಯನ್‌ನತ್ತ ಕೊಂಡೊಯ್ಯಲಾಗುವುದು ಮತ್ತು ಏಕರೂಪದ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದೆ.
Advertisement
ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly polls) ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸಿಎಂ ಭೂಪೇಂದ್ರ ಪಟೇಲ್ (Bhupendra Patel) ಸಮ್ಮುಖದಲ್ಲಿ ‘ಸಂಕಲ್ಪ ಪತ್ರ’ ಚುನಾವಣಾ ಪ್ರಣಾಳಿಕೆ (Manifesto) ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಜೆ.ಪಿ ನಡ್ಡಾ ಮಹಿಳೆಯರನ್ನು ಸ್ವಾವಲಂಬಿ ಮಾಡುವುದು ನಮ್ಮ ಗುರಿ ಎಂದರು. ಇದನ್ನೂ ಓದಿ: ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್
Advertisement
Advertisement
ಸಂಕಲ್ಪ ಪತ್ರದಲ್ಲಿ ಪ್ರಧಾನ ಮಂತ್ರಿ ಆರೋಗ್ಯ ವಿಮೆ ಯೋಜನೆಯನ್ನು 5 ರಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು, ನೀರಾವರಿ ಯೋಜನೆಯಲ್ಲಿ 25 ಸಾವಿರ ಕೋಟಿ ವರೆಗೆ ಹೂಡಿಕೆ ಮಾಡಲಾಗುವುದು, 25 ಬಿರ್ಸಾ ಮುಂಡಾ ವಸತಿ ಶಾಲೆಗಳನ್ನು ತೆರೆಯಲಾಗುವುದು. 5 ವರ್ಷದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು, 2ಸಿ ಫುಡ್ ಪಾರ್ಕ್ ಸ್ಥಾಪಿಸಲಾಗುವುದು, 5 ವರ್ಷಗಳಲ್ಲಿ ಮಹಿಳೆಯರಿಗೆ 1 ಲಕ್ಷ ಉದ್ಯೋಗ ನೀಡಲಾಗುವುದು, ಏಕರೂಪ ನಾಗರಿಕ ಸಂಹಿತೆ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದೆ.
Advertisement
ಶ್ರಮಿಕ್ ಕ್ರೆಡಿಟ್ ಕಾರ್ಡ್‍ನಲ್ಲಿ 2 ಲಕ್ಷದವರೆಗೆ ಸಾಲ, ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟಿ ನೀಡಲಾಗುವುದು, ಕೃಷಿ ಮೂಲಸೌಕರ್ಯ ನಿಧಿಯಡಿ 10 ಸಾವಿರ ಕೋಟಿ ರೂ. ಗುಜರಾತ್‍ನಲ್ಲಿ ವಿನಿಯೋಗಿಸಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಇದನ್ನೂ ಓದಿ: ಓಷನ್‍ಸ್ಯಾಟ್, 8 ಇತರೆ ಉಪಗ್ರಹಗಳನ್ನು ಹೊತ್ತ PSLV-C54 ರಾಕೆಟ್ ಉಡಾಯಿಸಿದ ಇಸ್ರೋ
ಡಿಸೆಂಬರ್ 01 ಮತ್ತು 05 ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ತವರು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಇತ್ತ ಕಾಂಗ್ರೆಸ್ ಅಧಿಕಾರಕ್ಕೆ ಹೋರಾಟ ಆರಂಭಿಸಿದ್ದು, ಮೊದಲ ಬಾರಿಗೆ ಆಪ್ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಡಿಸೆಂಬರ್ 08 ರಂದು ಫಲಿತಾಂಶ ಪ್ರಕಟವಾಗಲಿದೆ.