ಗಾಂಧೀನಗರ: ಪ್ರಧಾನಿ ಮೋದಿ (Narendra Modi) ತವರು ಗುಜರಾತ್ ವಿಧಾನಸಭಾ ಚುನಾವಣೆ (Gujarat Election) ಅಂತಿಮ ಹಂತ ತಲುಪಿದೆ. ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
ಪ್ರಧಾನಿಯವರು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಲು ಕ್ಯೂನಲ್ಲಿ ನಿಂತಿದ್ದ ಜನಸಮೂಹದತ್ತ ಹೋದರು. ನಂತರ ಜನರಿಗೆ ನಮಸ್ಕರಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದನ್ನೂ ಓದಿ: ಪ್ರಾಂಶುಪಾಲರಿಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲು ಒತ್ತಾಯಿಸಿದ ABVP ಕಾರ್ಯಕರ್ತರು
Advertisement
Advertisement
ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ ಮಾಡಿದರು. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
Advertisement
2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಎಎಪಿ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್ 90 ಕ್ಷೇತ್ರದಲ್ಲಿ ಕಣದಲ್ಲಿದೆ. ಇದನ್ನೂ ಓದಿ: ತಾಳಿಕಟ್ಟೋ ಕೊನೆ ಕ್ಷಣದಲ್ಲೇ ಹೃದಯಾಘಾತ – 21ರ ಯುವತಿ ಸಾವು
Advertisement
2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಡಿಸೆಂಬರ್ 8ರಂದ ಮತ ಎಣಿಕೆ ನಡೆಯಲಿದೆ.