ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ಇಂದು ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ (Rajeev Kumar) ಮಧ್ಯಾಹ್ನ12 ಗಂಟೆಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ.
ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಈ ಮಧ್ಯೆ ಗುಜರಾತ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಇದನ್ನೂ ಓದಿ: ಭಾರತಮಾತೆ ವಿಧವೆಯಲ್ಲ – ಹಣೆಗೆ ಬೊಟ್ಟು ಇಡದ ಪತ್ರಕರ್ತೆಗೆ ಪ್ರತಿಭಟನಾಕಾರನಿಂದ ತರಾಟೆ
Advertisement
Advertisement
ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.
Advertisement
Advertisement
2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 182 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 79 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೂ 30 ವರ್ಷಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದನ್ನೂ ಓದಿ: ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್