ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಇಂದು ಗುಜರಾತಿನ ಅಹಮದಾಬಾದ್ ತೆರಳಲಿದ್ದಾರೆ.
ಬಿಜೆಪಿ(BJP) ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನಿಯೋಜನೆ ಮಾಡಿದೆ.
ಡಿ. 2 ಸೋಮವಾರದಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿ ಹಲವು ರಾಜ್ಯ ನಾಯಕರೂ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?
ಗುಜರಾತ್ ಚುನಾವಣೆಯಲ್ಲಿ(Gujarat Election) ಬಿಜೆಪಿ 156 ಸ್ಥಾನ ಗೆದ್ದರೆ ಕಾಂಗ್ರೆಸ್ 17, ಆಮ್ ಆದ್ಮಿ 5, ಸಮಾಜವಾದಿ ಪಕ್ಷ 1, ಇತರರು 3 ಸ್ಥಾನವನ್ನು ಗಳಿಸಿದ್ದಾರೆ. ಈ ಮೂಲಕ 27 ವರ್ಷಗಳ ಆಳ್ವಿಕೆ ನಂತರವೂ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.