ಅಹಮದಾಬಾದ್: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭೆಯ 2ನೇ ಹಂತದ ಚುನಾವಣೆಯ (Gujarat Election) ಪ್ರಚಾರ ಇಂದು ಅಂತ್ಯವಾಗಲಿದೆ. ಮತದಾರರನ್ನು ಓಲೈಸಿಕೊಳ್ಳಲು ಅಭ್ಯರ್ಥಿಗಳು ಕೊನೆಯ ಹಂತದ ಪ್ರಯತ್ನ ನಡೆಸಿದ್ದಾರೆ.
ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನ 89 ಸ್ಥಾನಗಳಿಗೆ ಡಿಸೆಂಬರ್ 01 ರಂದು ಮತದಾನ ನಡೆದಿದ್ದು ಶೇ.63.31 ಮತದಾನ ನಡೆದಿದೆ. 2ನೇ ಹಂತದ ಮತದಾನ (Voting) ಸೋಮವಾರ ನಡೆಯಲಿದೆ. 2ನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇದನ್ನೂ ಓದಿ: ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ
Advertisement
Advertisement
ಆಡಳಿತಾರೂಢ ಬಿಜೆಪಿ (BJP), ಪ್ರತಿಪಕ್ಷ ಕಾಂಗ್ರೆಸ್ (Congress) ಮತ್ತು ಅರವಿಂದ್ ಕೇಜ್ರಿವಾಲ್ (Avind Kejriwal) ನೇತೃತ್ವದ ಆಮ್ ಆದ್ಮಿ ಪಕ್ಷ (AAP) ಸೇರಿದಂತೆ ಸುಮಾರು 60 ರಾಜಕೀಯ ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2ನೇ ಹಂತದ ಮತದಾನದ ಭಾಗವಾಗಿರುವ 93 ವಿಧಾನಸಭಾ ಕ್ಷೇತ್ರಗಳು ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ ಉತ್ತರ ಮತ್ತು ಮಧ್ಯ ಗುಜರಾತ್‌ನ 14 ಜಿಲ್ಲೆಗಳ ವ್ಯಾಪ್ತಿಯಲ್ಲಿವೆ. ಇದನ್ನೂ ಓದಿ: ಮಂತ್ರಾಲಯ ರಾಯರ ದರ್ಶನ ಪಡೆದ ಶಿವಣ್ಣ ದಂಪತಿ
Advertisement
Advertisement
2ನೇ ಹಂತದ ಚುನಾವಣೆ ನಡೆಯಲಿರುವ ಪ್ರಮುಖ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಘಟ್ಲೋಡಿಯಾ ಕ್ಷೇತ್ರ, ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ವಿರಾಮಗಾಮ್ ಕ್ಷೇತ್ರ ಮತ್ತು ಗಾಂಧೀನಗರ ದಕ್ಷಿಣದಿಂದ ಅಲ್ಪೇಶ್ ಠಾಕೂರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್ 1 ಮತ್ತು 2 ರಂದು ಅಹಮದಾಬಾದ್‌ನಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ರೋಡ್‌ಶೋಗಳನ್ನು ನಡೆಸಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರು. ಇಂದು ಬಿಜೆಪಿ ಸ್ಟಾರ್ ಪ್ರಚಾರಕರು ಹಲವು ರೋಡ್‌ಶೋಗಳು ಮತ್ತು ಚುನಾವಣಾ ರ‍್ಯಾಲಿ ನಡೆಸಿ ಪ್ರಚಾರ ಮಾಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಧೋಲ್ಕಾ, ಮಹುಧಾ ಮತ್ತು ಖಂಭತ್ ಪಟ್ಟಣಗಳಲ್ಲಿ ಚುನಾವಣಾ ರ‍್ಯಾಲಿಗಳನ್ನು ನಡೆಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಉತ್ತರ ಗುಜರಾತ್‌ನ ಮೊಡಾಸಾ ಮತ್ತು ಸಿದ್ಧಾಪುರ ಪಟ್ಟಣಗಳಲ್ಲಿ ರೋಡ್‌ಶೋಗಳನ್ನು ನಡೆಸಿದ್ದಾರೆ. ಆ್ಯಪ್ ಮತ್ತು ಕಾಂಗ್ರೆಸ್ ನಾಯಕರು ಕೊನೆಯ ಕ್ಷಣದ ಪ್ರಚಾರ ನಡೆಸಿ, ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ.