ನವದೆಹಲಿ: ಗುಜರಾತ್ನಲ್ಲಿ ಮತ್ತೆ ಕಮಲ ಅರಳಲಿದ್ದು ಸತತ 7ನೇ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ.
ಚುನಾವಣೋತ್ತರ ಸಮೀಕ್ಷೆಗಳು(Gujarat Exit Poll Result) ಈ ಬಾರಿಯೂ ಬಿಜೆಪಿಗೆ(BJP) ಸ್ಪಷ್ಟ ಬಹುಮತ ಸಿಗಲಿವೆ ಎಂದು ಭವಿಷ್ಯ ನುಡಿದಿವೆ.
Advertisement
Advertisement
ರಿಪಬ್ಲಿಕ್ ಟಿವಿ ಬಿಜೆಪಿ 128-148, ಕಾಂಗ್ರೆಸ್+ 30-42, ಆಪ್ 2-10 ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. ನ್ಯೂಸ್ ಎಕ್ಸ್ ಬಿಜೆಪಿ 117-140, ಕಾಂಗ್ರೆಸ್ + 34-51, ಆಪ್ 6-13 ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.
Advertisement
Advertisement
ಕಳೆದ 27 ವರ್ಷಗಳಿಂದ ಬಿಜೆಪಿ ಗುಜರಾತ್ನಲ್ಲಿ ಅಧಿಕಾರದಲ್ಲಿದೆ. 1995 ರಿಂದ ನಡೆದ 6 ಚುನಾವಣೆಗಳಲ್ಲಿ ಕಮಲ ಅರಳುತ್ತಲೇ ಇದೆ. ಮೋದಿ ಪ್ರಧಾನಿಯಾದ ಬಳಿಕ ನಾಯಕತ್ವದ ಕೊರತೆ ಅನುಭವಿಸಿದರೂ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಕಡಿಮೆ ಮಾಡಿದ್ದು ಬಿಜೆಪಿಗೆ ನೆರವಾಗಿದೆ.
ಒಟ್ಟು 182 ಸ್ಥಾನಗಳಿದ್ದು ಸರಳ ಬಹುಮತಕ್ಕೆ 92 ಸ್ಥಾನಗಳ ಅಗತ್ಯವಿದೆ. ಗುಜರಾತ್ ಚುನಾವಣೆಯ ಫಲಿತಾಂಶ ಡಿ.8 ರಂದು ಪ್ರಕಟವಾಗಲಿದೆ.