ಮಹಾತ್ಮ ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ

Public TV
1 Min Read
Tushar Arun Gandhi

ಅಹಮದಾಬಾದ್: ಸಬರಮತಿ ಆಶ್ರಮದ ಸುತ್ತ ನಡೆಯಲಿರುವ ಪುನರ್ ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡುವಂತೆ ಕೋರಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ. ಆಶ್ರಮಕ್ಕೆ ಯಾವುದೇ ಧಕ್ಕೆಗಳಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಕೋರ್ಟ್ ಅರ್ಜಿ ವಜಾ ಮಾಡಿದೆ.

gandhi ashram

ಸಬರಮತಿ ಆಶ್ರಮದ ಸುತ್ತ 55 ಎಕರೆ ಭೂಮಿಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಆಶ್ರಮಕ್ಕೆ ಧಕ್ಕೆಯಾಗಲಿದೆ ಮತ್ತು ತನ್ನ ಮೂಲ ಸಂಸ್ಕೃತಿಯನ್ನು ಕಳೆದುಕೊಳ್ಳಲಿದೆ. ಹೀಗಾಗಿ ಕಾಮಗಾರಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ : KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

gandhi

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರನ್ನೊಳಗೊಂಡ ಪೀಠವು, ಈ ಯೋಜನೆಯು ಮಹಾತ್ಮ ಗಾಂಧಿಯವರ ಆಲೋಚನೆಗಳು ಮತ್ತು ತತ್ವಶಾಸ್ತ್ರವನ್ನು ಉತ್ತೇಜಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಗಾಂಧಿ ಆಶ್ರಮವು ಎಲ್ಲಾ ವಯೋಮಾನದ ಮನುಕುಲಕ್ಕೆ ಕಲಿಕೆಯ ಸ್ಥಳವಾಗಿದೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

court order law

ವಿವಾರಣೆ ವೇಳೆ ಅಸ್ತಿತ್ವದಲ್ಲಿರುವ ಗಾಂಧಿ ಆಶ್ರಮಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಮತ್ತು ಆಶ್ರಮದ ಮೂಲ ಸ್ವರೂಪ ಬದಲಾವಣೆ ಮಾಡುವುದಿಲ್ಲ, ಆಶ್ರಮದ ಸುತ್ತಮುತ್ತಲಿನ 55 ಎಕರೆ ಭೂಮಿಯನ್ನು ಮಾತ್ರ ಮರು ಅಭಿವೃದ್ಧಿಪಡಿಸುತ್ತದೆ ಎಂದು ಅಡ್ವೊಕೇಟ್ ಜನರಲ್ ಕಮಲ್ ತ್ರಿವೇದಿ ಸಲ್ಲಿಸಿದ ಸಲ್ಲಿಕೆಯನ್ನು ಕೋರ್ಟ್ ಪರಿಗಣಿಸಿದೆ.

ಈ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು ವಿವರವಾದ ವಿಚಾರಣೆಯ ನಂತರ ತೆಗೆದುಕೊಳ್ಳಬೇಕಾದ ಹೊಸ ನಿರ್ಧಾರಕ್ಕಾಗಿ ವಿಷಯವನ್ನು ಪಟ್ಟಿ ಮಾಡಲು ಮತ್ತೆ ಹೈಕೋರ್ಟ್‍ಗೆ ವರ್ಗಾಯಿಸಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *