ಗಾಂಧಿನಗರ: ಗುಜರಾತ್‌ನಲ್ಲಿ ಮದ್ಯ ಸೇವನೆ ಮತ್ತು ಮಾರಾಟಕ್ಕೆ ಅಲ್ಲಿನ ಸರ್ಕಾರ ಅವಕಾಶ ಕಲ್ಪಿಸಿದೆ. ಗುಜರಾತ್ ಸರ್ಕಾರವು ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ನಲ್ಲಿ ವೈನ್ ಮತ್ತು ಡೈನ್ (Wine and Dine) ನೀಡುವ ಹೋಟೆಲ್, ರೆಸ್ಟೋರೆಂಟ್ಸ್ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಿದೆ.
ರಾಜಧಾನಿ ಗಾಂಧಿನಗರದ ಸಂಪೂರ್ಣ ಗಿಫ್ಟ್ ಸಿಟಿಯಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಾಗೂ ಮಾಲೀಕರಿಗೆ ಮದ್ಯ ಸೇವನೆ ಪರವಾನಗಿಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬಹುಮಹಡಿ ಕಟ್ಟಡದ 8ನೇ ಮಹಡಿಯಿಂದ ಬಿದ್ದ ಲಿಫ್ಟ್- ಐವರು ಟೆಕ್ಕಿಗಳು ಐಸಿಯುಗೆ ದಾಖಲು
ಇದಲ್ಲದೇ, ಪ್ರತಿ ಕಂಪನಿಯ ಅಧಿಕೃತ ಸಂದರ್ಶಕರು ಆ ಕಂಪನಿಯ ಕಾಯಂ ಉದ್ಯೋಗಿಗಳ ಉಪಸ್ಥಿತಿಯಲ್ಲಿ ತಾತ್ಕಾಲಿಕ ಪರವಾನಗಿ ಹೊಂದಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗಿದೆ.
ಗಿಫ್ಟ್ ಸಿಟಿಯಲ್ಲಿರುವ ಅಥವಾ ಬರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಅಥವಾ ಕ್ಲಬ್‌ಗಳು ಅಲ್ಲಿ ವೈನ್ ಮತ್ತು ಡೈನ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗಿಫ್ಟ್ ಸಿಟಿಯಲ್ಲಿ ಅಧಿಕೃತವಾಗಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳು ಮತ್ತು ಅಧಿಕೃತವಾಗಿ ಭೇಟಿ ನೀಡುವ ಸಂದರ್ಶಕರು ಹೋಟೆಲ್‌ಗಳು, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಸೇವಿಸಬಹುದು. ಆದ್ರೆ, ಇಲ್ಲಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.
ಗಿಫ್ಟ್ ಸಿಟಿಯು ತೆರಿಗೆಗೆ ತಟಸ್ಥ ಹಣಕಾಸು ಕೇಂದ್ರವಾಗಿದ್ದು, ಸಿಂಗಾಪುರದಂತಹ ಕೇಂದ್ರಗಳೊಂದಿಗೆ ಸ್ಪರ್ಧಿಸುವ ಗುರಿ ಹೊಂದಿದೆ. ಏಕೆಂದರೆ ಇದು ಹಣಕಾಸಿನ ಪ್ರೋತ್ಸಾಹ ಮತ್ತು ಸಡಿಲವಾದ ಕಾನೂನು ನಿಯಂತ್ರಣಗಳನ್ನು ಹೊಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ