ಧಾರವಾಡ: ಮುಂಬರುವ ಕರ್ನಾಟಕ ವಿಧಾನಸಭೆ (Karnataka Election) ಚುನಾವಣೆಗೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ (BJP) ಗುಜರಾತ್ ಮಾಡೆಲ್ (Gujarat Model) ಅನುಸರಿಸಲಿದೆ ಅಂತಾ ಈಗಲೇ ಲೆಕ್ಕಾಚಾರ ಹಾಕುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಧಾರವಾಡದಲ್ಲಿ (Dharwad) ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ, ಗೆಲುವು ಹಾಗೂ ಪಕ್ಷದ ಸಿದ್ಧಾಂತಕ್ಕೆ ಬದ್ಧತೆಯೇ ಮುಖ್ಯ ಮಾನದಂಡವಾಗಲಿದೆ ಎಂದರು. ಇದನ್ನೂ ಓದಿ: ಜನವರಿಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ: ಪ್ರಹ್ಲಾದ್ ಜೋಶಿ
Advertisement
Advertisement
ಆಡಳಿತ ವಿಚಾರದಲ್ಲಿ ಗುಜರಾತ್ ಮಾಡೆಲ್ ಅನುಸರಿಸುವುದು ಉತ್ತಮ. ಕಳೆದ 8 ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾನು ಕೆಲಸ ಮಾಡ್ತಿದ್ದೇನೆ. ಒಳ್ಳೆಯ ಸಂಗತಿಗಳು ಎಲ್ಲಿಯೇ ನಡೆದರೂ ಅದನ್ನ ತೆಗೆದುಕೊಳ್ಳಬೇಕು. ಕರ್ನಾಟಕದ ಆಡಳಿತದಲ್ಲೂ ಅಂತಹ ಮಾದರಿಯನ್ನ ಅನುಸರಿಸಲಾಗುವುದು ಎಂದು ಜೋಶಿ ಹೇಳಿದರು.
Advertisement
Advertisement
ಜನವರಿ 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ತಯಾರಿ ಮಾಡುವಂತೆ ಜೋಶಿ ಸೂಚನೆ
ಧಾರವಾಡದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕಟ್ಟಡ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೀಕ್ಷಿಸಿದರು. ಜನವರಿ 1 ರೊಳಗೆ ನೂತನ ಕಟ್ಟಡ ಕಾಮಗಾರಿ ಮುಗಿಸುವಂತೆ ಪ್ರಹ್ಲಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು