ಗಾಂಧೀನಗರ: ಬೃಹತ್ ಸೇತುವೆ (Bridge) ಕುಸಿತದ ದುರಂತದ ವೇಳೆ ಗಾಯಗೊಂಡಿದ್ದವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಗುಜರಾತ್‍ನ ಮೋರ್ಬಿಯ ಸಿವಿಲ್ ಆಸ್ಪತ್ರೆಗೆ ಬರುತ್ತಿದ್ದರಿಂದ ನಿನ್ನೆ ರಾತ್ರಿಯಿಡೀ ಅಲ್ಲಿನ ಸಿಬ್ಬಂದಿ ಸ್ವಚ್ಛತೆ ಮಾಡಿದ್ದಾರೆ. ಇದೀಗ ಈ ಘಟನೆ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ.
ಗುಜರಾತ್‍ನ (Gujarat) ಮೊರ್ಬಿಯಲ್ಲಿ (Morbi) ನಡೆದ ತುಗುಸೇತುವೆ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದರು. ಜೊತೆಗೆ 100ಕ್ಕೂ ಹೆಚ್ಚು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಹಲವರು ಮೋರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರಧಾನಿ ಮೋದಿ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡುವ ವಿಷಯವನ್ನು ಅಲ್ಲಿನ ಸಿಬ್ಬಂದಿ ತಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಆಸ್ಪತ್ರೆ ಪೂರ್ತಿ ಸ್ವಚ್ಛಗೊಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Advertisement
त्रासदी का इवेंट
कल PM मोदी मोरबी के सिविल अस्पताल जाएंगे। उससे पहले वहां रंगाई-पुताई का काम चल रहा है। चमचमाती टाइल्स लगाई जा रही हैं।
PM मोदी की तस्वीर में कोई कमी न रहे, इसका सारा प्रबंध हो रहा है।
इन्हें शर्म नहीं आती! इतने लोग मर गए और ये इवेंटबाजी में लगे हैं। pic.twitter.com/MHYAUsfaoC
— Congress (@INCIndia) October 31, 2022
Advertisement
ವೀಡಿಯೋದಲ್ಲಿ ಕೆಲವು ಗೋಡೆಗಳು ಮತ್ತು ಚಾವಣಿಯ ಭಾಗಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ ಮತ್ತು ಹೊಸ ವಾಟರ್ ಕೂಲರ್‌ಗಳನ್ನು ತರಲಾಯಿತು. ಸೇತುವೆ ದುರಂತದಲ್ಲಿ ಗಾಯಗೊಂಡ ಸುಮಾರು 13 ಮಂದಿ ದಾಖಲಾಗಿರುವ ಎರಡು ವಾರ್ಡ್‍ಗಳಲ್ಲಿನ ಬೆಡ್‍ಶೀಟ್‍ಗಳನ್ನು ಸಹ ತ್ವರಿತವಾಗಿ ಬದಲಿಸಿದ್ದಾರೆ. ಇದನ್ನೂ ಓದಿ: ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ
Advertisement
Morbi Civil Hospital का दृश्य…
कल प्रधानमंत्री के Photoshoot में कोई कमी ना रह जाए इसलिए अस्पताल की मरम्मत की जा रही है।
अगर भाजपा ने 27 वर्षों में काम किया होता तो आधी रात को अस्पताल को चमकाने की जरूरत न पड़ती।#BJPCheatsGujarat pic.twitter.com/h83iUmPzKA
— AAP (@AamAadmiParty) October 31, 2022
Advertisement
ಘಟನೆಗೆ ಸಂಬಂಧಿಸಿ ಪ್ರತಿಪಕ್ಷಗಳು ಬಿಜೆಪಿಯನ್ನು ಟೀಕಿಸಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ (ಎಎಪಿ) ಟ್ವೀಟ್ ಮಾಡಿ, ಬಿಜೆಪಿಯು ಪ್ರಧಾನಿಗೆ ಫೋಟೋಶೂಟ್ ಮಾಡಿಸಲು ಈವೆಂಟ್ ಮ್ಯಾನೇಜ್‍ಮೆಂಟ್‍ನಲ್ಲಿ ನಿರತವಾಗಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಗುಜರಾತ್ ಸೇತುವೆ ಕುಸಿತ – ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ