ಗಾಂಧಿನಗರ: ವಿದೇಶಿ ಮದ್ಯದ (Liquor) ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ (Congress) ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
10 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಗುಜರಾತ್ ಪೊಲೀಸರು (Gujarat Police) ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ (Meghna Patel) ಅವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ!
ಅಪರಿಚಿತರ ಗುಂಪೊಂದು ಬೊಲೆರೋ ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ ರೂ.ಗಳ ವಿದೇಶಿ ಸರಕನ್ನು ತರಲಾಗಿದೆ ಎಂಬುದು ತಿಳಿದುಬಂದಿತ್ತು. ಇದನ್ನೂ ಓದಿ: ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ- ಕ್ರಮಕ್ಕೆ ಶಿಷ್ಯೆ ಒತ್ತಾಯ
ಬಳಿಕ ಮೇಘನಾ ಪಟೇಲ್ ಅವರನ್ನು ಬಂಧಿಸಿ ಅವರ ಮೂಲಕ ಮತ್ತಷ್ಟು ಮದ್ಯ ವಶಪಡಿಸಿಕೊಳ್ಳಲಾಯಿತು. ಒಟ್ಟು 10 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡು ಆಕೆಯನ್ನು ಬಂಧಿಸಲಾಯಿತು ಎಂದು ಉಮ್ರಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಸೂಕ್ತ ಕಾನೂನಿನ ಅಡಿ ಕೇಸ್ ದಾಖಲಿಸಿದ್ದು, ಮೇಘನಾ ಪಟೇಲ್ ಹಾಗೂ ಮದ್ಯ ಸಾಗಿಸುತ್ತಿದ್ದ ಕಾರು ಚಾಲಕನನ್ನು ಬಂಧಿಸಿದ್ದೇವೆ.