ಗಾಂಧೀನಗರ: ಗುಜರಾತ್‌ನ ಜುನಾಗಢ್‌ನಲ್ಲಿ (Junagadh, Gujrat) ಅಕ್ರಮವಾಗಿ ನಿರ್ಮಿಸಲಾದ ದರ್ಗಾ ಮತ್ತು ಎರಡು ದೇವಾಲಯಗಳನ್ನು (Dargah, Temples) ಪೊಲೀಸರು ನೆಲಸಮಗೊಳಿಸಿದ್ದಾರೆ.
ಅಕ್ರಮ ಕಟ್ಟಡಗಳ ನೆಲಸಮ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಪರಿಸ್ಥಿತಿ ಹದಗೆಡದಂತೆ ನೋಡಿಕೊಳ್ಳಲು ತಡರಾತ್ರಿ ಈ ಕ್ರಮ ಕೈಗೊಳ್ಳಲಾಗಿದೆ. ಕೆಡವುವ ವೇಳೆ ಸುಮಾರು 1000 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿತ್ತು.
Advertisement
Advertisement
ಕಳೆದ ವರ್ಷ ದರ್ಗಾವನ್ನು ಕೆಡವಲು ನೋಟಿಸ್ ನೀಡಲಾಗಿತ್ತು. ಅದರಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದರು. ಈ ವೇಳೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಳಿಕ ಇದು ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ತೀರ್ಪಿನ ನಂತರ ಶನಿವಾರ ರಾತ್ರಿ ದರ್ಗಾವನ್ನು ಅಕ್ರಮ ಎಂದು ಘೋಷಿಸಿ ಕೆಡವಲಾಯಿತು. ಧ್ವಂಸ ಕಾರ್ಯಾಚರಣೆಯು ಮಧ್ಯರಾತ್ರಿ ಸುಮಾರು 2 ಗಂಟೆಗೆ ಆರಂಭವಾಗಿ, ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಮುಗಿದಿದೆ. ಕಾರ್ಯಾಚರಣೆಯ ಸ್ಥಳದಿಂದ 300-400 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು.
Advertisement
Advertisement
ಕಳೆದ ವರ್ಷ ನಡೆದಿದ್ದೇನು..?: ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ರಸ್ತೆ ಮಧ್ಯೆ ನಿರ್ಮಿಸಿರುವ ದರ್ಗಾವನ್ನು ತೆರವುಗೊಳಿಸಲು ಈ ಹಿಂದೆಯೂ ಪ್ರಯತ್ನ ನಡೆಸಲಾಗಿತ್ತು. ಕಳೆದ ವರ್ಷ ಜೂನ್‌ನಲ್ಲಿ ಅಕ್ರಮ ದರ್ಗಾ ಕುರಿತು ಭಾರೀ ಗಲಾಟೆ ನಡೆದಿತ್ತು. ಪೊಲೀಸ್ ತಂಡವು ಕ್ರಮ ಕೈಗೊಳ್ಳಲು ಸ್ಥಳಕ್ಕೆ ತಲುಪಿತ್ತು. ಈ ವೇಳೆ ಸ್ಥಳೀಯ ಜನರು ಪ್ರತಿಭಟನೆಗೆ ಮುಂದಾದರು. ವಾಹನಗಳಿಗೆ ಬೆಂಕಿ ಹಚ್ಚಿದರು. ಇದನ್ನೂ ಓದಿ: ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್
ಸಂಜೆಯಾಗುತ್ತಿದ್ದಂತೆಯೇ ಸುಮಾರು 200 ರಿಂದ 300 ಸ್ಥಳೀಯ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರು ಅಲ್ಲಿಂದ ತೆರಳಲು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದರು. ಕಲ್ಲು ತೂರಾಟವನ್ನು ಕೂಡ ಮಾಡಿದ ಘಟನೆ ಕೂಡ ನಡೆದಿತ್ತು. ಈ ಘಟನೆಯಲ್ಲಿ ಉಪ ಎಸ್ಪಿ ಹಾಗೂ ಮೂವರು ಪೊಲೀಸರು ಗಾಯಗೊಂಡಿದ್ದರು.
ಈ ದರ್ಗಾವನ್ನು ಸರಿ ಸುಮಾರು 2 ದಶಕಗಳ ಹಿಂದೆ ನಿರ್ಮಿಸಲಾಗಿತ್ತು. ಇದೀಗ ದರ್ಗಾದ ಜೊತೆಗೆ ಜುನಾಗಢ್‌ನ ವಿವಿಧ ಸ್ಥಳಗಳಲ್ಲಿ ನಿರ್ಮಿಸಲಾದ ಎರಡು ಅಕ್ರಮ ದೇವಾಲಯಗಳನ್ನು ಸಹ ಕೆಡವಲಾಗಿದೆ.