ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚೊವ ಸಂಪುಟದಲ್ಲಿ ಖಾತೆ ಹಂಚಿಕೆ ಮಾಡಲಾಗಿದ್ದು, ಈ ಹಿಂದೆ ಗುಜರಾತ್ ನಲ್ಲಿ ನಡೆದಿದ್ದ ಸೀನ್ ದೆಹಲಿಯಲ್ಲೂ ರಿಪೀಟ್ ಆಗಿದೆ.
ಹೌದು. ದೆಹಲಿಯಲ್ಲಿ ಗುಜರಾತ್ ಮಾಡೆಲ್ ರಿಪೀಟ್ ಆಗಿದ್ದು, ನಂಬರ್ 1 ಸ್ಥಾನದಲ್ಲಿ ಮೋದಿಯವರು ಇದ್ದರೆ, ನಂಬರ್ 2 ಸ್ಥಾನದಲ್ಲಿ ಅಮಿತ್ ಶಾ ಇದ್ದಾರೆ. ಈ ಮೂಲಕ 2002ರ ಗುಜರಾತ್ ಸೀನ್ 2019ಕ್ಕೆ ದೆಹಲಿಯಲ್ಲಿ ರಿಪೀಟ್ ಆಗಿದ್ದು ರಾಜನಾಥ್ ಸಿಂಗ್ ಅವರು 3ನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಬಂಪರ್: ಡಿವಿಎಸ್, ಜೋಶಿ, ಅಂಗಡಿಗೆ ಖಾತೆ ಹಂಚಿಕೆ
Advertisement
Advertisement
ರಾಜನಾಥ್ ಸಿಂಗ್ ಹಿಂದಿಕ್ಕಿ ಅಮಿತ್ ಶಾ ಅವರು ಗೃಹಖಾತೆ ಪಡೆದಿದ್ದಾರೆ. ಈ ಹಿಂದೆ ಮೋದಿಯವರು ಗುಜರಾತ್ ನಲ್ಲಿ ಸಿಎಂ ಆಗಿದ್ದಾಗ ಅಮಿತ್ ಶಾ ಗೃಹಸಚಿವರಾಗಿದ್ದರು. ಕರ್ನಾಟಕದಿಂದ ಮಂತ್ರಿಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಬಂಪರ್ ಆಫರ್ ಸಿಕ್ಕಿದ್ದು, ಅರುಣ್ ಜೇಟ್ಲಿ ನಿರ್ವಹಿಸುತ್ತಿದ್ದ ಹಣಕಾಸು ಖಾತೆ ದೊರಕಿದೆ. ಸೀತಾರಾಮನ್ ಅವರು ನಿರ್ವಹಿಸುತ್ತಿದ್ದ ರಕ್ಷಣಾ ಖಾತೆ ಈ ಬಾರಿ ರಾಜನಾಥ್ ಸಿಂಗ್ ಪಾಲಾಗಿದೆ. ಇದನ್ನೂ ಓದಿ: ಅಮಿತ್ ಶಾಗೆ ಗೃಹ, ಸೀತಾರಾಮನ್ಗೆ ಹಣಕಾಸು – ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?