ಬೆಂಗಳೂರು: ಗುಜರಾತಿನಲ್ಲಿ(Gujarat) ನಡೆದಿರುವುದು ಕರ್ನಾಟಕಕ್ಕೂ(Karnataka) ಮಾದರಿಯಾಗಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್(Lahar Singh Siroya) ಹೇಳಿದ್ದಾರೆ.
ಗುಜರಾತ್ ಹಿರಿಯ ಬಿಜೆಪಿ ನಾಯಕರು ಚುನಾವಣೆಗೆ ಸ್ಪರ್ಧಿಸದೇ ಇರುವ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ಮಾತ್ರವಲ್ಲ ಕೆಳ ಹಂತದವರಿಂದ್ಲೂ ವಿದ್ಯಾರ್ಥಿನಿಯರ ಬಳಕೆ: ಪರಶು
Advertisement
This is a commendable move to strengthen democracy by allowing a smooth generational change. Karnataka assembly polls will be held in a few months from now. Senior leaders in the state should make way for younger people in the larger interest of the state and nation. (2/2)
— Lahar Singh Siroya (@LaharSingh_MP) November 10, 2022
Advertisement
ಟ್ವೀಟ್‌ನಲ್ಲಿ ಏನಿದೆ?
ಗುಜರಾತಿನಲ್ಲಿ ನಡೆದಿರುವುದು ಕರ್ನಾಟಕಕ್ಕೂ ಮಾದರಿಯಾಗಬೇಕು. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಮಾಜಿ ಸಚಿವರಾದ ಭೂಪೇಂದ್ರ ಸಿನ್ಹಾ ಚುಡಸಾಮ ಮತ್ತು ಪ್ರದೀಪ್ ಸಿನ್ಹ್ ಜಡೇಜಾ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
Advertisement
ಮುಂದಿನ ಪೀಳಿಗೆಯ ಬದಲಾವಣೆಗೆ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಶ್ಲಾಘನೀಯ ಕ್ರಮವಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯ ಮತ್ತು ರಾಷ್ಟ್ರದ ಹಿತಾಸಕ್ತಿ ದೃಷ್ಟಿಯಿಂದ ರಾಜ್ಯದ ಹಿರಿಯ ನಾಯಕರು ಕಿರಿಯರಿಗೆ ದಾರಿ ಮಾಡಿಕೊಡಬೇಕು.