ಗಾಂಧೀನಗರ: ನಕಲಿ ಮದ್ಯ ಸೇವಿಸಿ 42 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಟಾಡ್ ಮತ್ತು ಅಹಮದಾಬಾದ್‌ನ ಇಬ್ಬರು ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, 6 ಪೊಲೀಸರನ್ನು ಗುಜರಾತ್ ಗೃಹ ಇಲಾಖೆ ಅಮಾನತುಗೊಳಿಸಿದೆ.
ಬೊಟಾಡ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮಿಥೈಲ್ ಆಲ್ಕೋಹಾಲ್ ಅಥವಾ ಮೆಥನಾಲ್ ಎಂಬ ಅತ್ಯಂತ ವಿಷಕಾರಿ ಕೈಗಾರಿಕಾ ದ್ರಾವಕದೊಂದಿಗೆ ನೀರನ್ನು ಬೆರೆಸಿ ನಕಲಿ ಮದ್ಯವನ್ನು ತಯಾರಿಸಿ ಪ್ರತಿ ಪೌಚ್‌ಗೆ 20 ರೂ.ಗೆ ಗ್ರಾಮಸ್ಥರಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ
Advertisement
Advertisement
ಮಿಥೈಲ್ ಆಲ್ಕೋಹಾಲ್ ಸೇವಿಸಿ 42 ಮಂದಿ ಮೃತಪಟ್ಟಿರುವುದು ವಿಧಿವಿಜ್ಞಾನ ವರದಿಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ನಾವು ಬೊಟಾಡ್ ಎಸ್ಪಿ ಕರಣ್‌ರಾಜ್ ವಘೇಲಾ ಮತ್ತು ಅಹಮದಾಬಾದ್ ಎಸ್ಪಿ ವೀರೇಂದ್ರಸಿಂಗ್ ಯಾದವ್ ಅವರನ್ನು ವರ್ಗಾವಣೆ ಮಾಡಿದ್ದೇವೆ. ಇಬ್ಬರು ಡೆಪ್ಯುಟಿ ಎಸ್‌ಪಿ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ತರಗತಿಯನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡ ಶಿಕ್ಷಕಿ – ವಿದ್ಯಾರ್ಥಿಗೆ ಮಸಾಜ್ ಮಾಡುವಂತೆ ಒತ್ತಾಯ
Advertisement
ಕರ್ತವ್ಯ ಲೋಪ ಮತ್ತು ಬದ್ಧತೆಯ ಕೊರತೆಯಿಂದಾಗಿ ಈ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಏಕೆಂದರೆ ಅವರು ತಮ್ಮ ಪ್ರದೇಶಗಳಲ್ಲಿ ವಿಷಕಾರಿ ರಾಸಾಯನಿಕಗಳನ್ನು ಬೆರೆಸಿದ ಮದ್ಯದ ಸಾಗಣೆ, ಮಾರಾಟ ಮತ್ತು ಸೇವನೆಯನ್ನು ತಡೆಯಲು ವಿಫಲರಾಗಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಹೊರಡಿಸಿದ ಅಮಾನತು ಪತ್ರಗಳಲ್ಲಿ ಉಲ್ಲೇಖಿಸಿದೆ.
ಜುಲೈ 25 ರಂದು ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಯ 42 ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಆದರೆ 97 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.