ಬೀದರ್: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾದ ಪರಿಣಾಮ ಗಡಿ ಜಿಲ್ಲೆ ಬೀದರ್‌ಗೆ ಗುಲಾಬ್ ಚಂಡಮಾರುತದ ಎಫೆಕ್ಟ್ ತಟ್ಟಿದೆ. ಜಿಲ್ಲೆಯಲ್ಲಿ ನಿನ್ನೆ ಮತ್ತು ಇಂದು ಬೆಳಗ್ಗೆಯಿಂದಲೇ ಮಳೆಯ ಅಬ್ಬರ ಜೋರಾಗಿದೆ.
Advertisement
ಗುಲಾಬ್ ಚಂಡಮಾರುತ ಪರಿಣಾಮವಾಗಿ ಜಿಲ್ಲೆಯಾದ್ಯಂತ ದಟ್ಟವಾದ ಮೋಡಗಳಿಂದ ಮಂಜಿನ ನಗರಿಯಾಗಿದ್ದು, ಇಂದು ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಗುಲಾಬ್ ಚಂಡಮಾರುತ ಎಫೆಕ್ಟ್ ನಿಂದಾಗಿ ಜಿಲ್ಲೆಯ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜನ ಮನೆಬಿಟ್ಟು ಬಿಟ್ಟು ಹೊರ ಬರಲಾಗದೆ. ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ- ಆಂಧ್ರ, ಒಡಿಶಾ ಕರಾವಳಿ ಜಿಲ್ಲೆಗಳಲ್ಲಿ ಗುಲಾಬ್ ಚಂಡಮಾರುತ ಭೀತಿ
Advertisement
Advertisement
ಗುಲಾಬ್ ಚಂಡಮಾರುತದಿಂದಾಗಿ ಒಡಿಶಾ ಹಾಗೂ ತೆಲಂಗಾಣ ರಾಜ್ಯದಲ್ಲಿ ಬಾರಿ ಮಳೆಯಾಗುತ್ತಿದ್ದು, ಹೈ ಅರ್ಲಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನು 28 ಗಂಟೆವರೆಗೆ ಗುಲಾಮ್ ಚಂಡಮಾರುತದ ಎಫೆಕ್ಟ್ ಜಿಲ್ಲೆಯಲ್ಲಿ ಇರಲಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಂದ್ ಮಾಡಿ ಜನರಿಗೆ ತೊಂದರೆ ಕೊಡಬೇಡಿ: ಬೊಮ್ಮಾಯಿ ಮನವಿ
Advertisement