ಬೀದರ್: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾದ ಹಿನ್ನೆಲೆ ಗಡಿ ಜಿಲ್ಲೆ ಬೀದರ್‌ಗೆ ಗುಲಾಬ್ ಚಂಡಮಾರುತದ ಎಫೆಕ್ಟ್ ತಟ್ಟಿದ ಪರಿಣಾಮ ಸತತ ಎರಡು ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇದನ್ನೂ ಓದಿ: ಪ್ರಧಾನಮಂತ್ರಿಗಳ ಅವಾಸ್ ಯೋಜನೆ, ಸೂರು ಕಲ್ಪಿಸುವಲ್ಲಿ ಬೆಂಗಳೂರು ಮೊದಲು: ಸೋಮಣ್ಣ
Advertisement
ಈ ಧಾರಾಕಾರ ಮಳೆಗೆ ಜಿಲ್ಲೆಯ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ದಟ್ಟವಾದ ಮೋಡಗಳ ಮಧ್ಯೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಗುಲಾಬ್ ಚಂಡಮಾರುತ ಒಡಿಶಾ ಹಾಗೂ ತೆಲಂಗಾಣ ರಾಜ್ಯದ ಮೇಲೆ ಭಾರೀ ಪ್ರಭಾವ ಬೀರಲಿದೆ. ಇದನ್ನೂ ಓದಿ: ಹಿಂದೂತ್ವ, ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ: ಅಭಯ್ ಪಾಟೀಲ್
Advertisement
Advertisement
ಹವಮಾನ ಇಲಾಖೆಯ ಪ್ರಕಾರ ಇನ್ನು ಎರಡರಿಂದ ಮೂರು ದಿನಗಳ ಕಾಲ ಗುಲಾಮ್ ಚಂಡಮಾರುತದ ಎಫೆಕ್ಟ್ ಜಿಲ್ಲೆಯಲ್ಲಿ ಇರಲಿದೆ ಎಂದು ಮಾಹಿತಿ ನೀಡಲಾಗಿದ್ದು, ಇದೇ ರೀತಿ ಸತತವಾಗಿ ಧಾರಾಕಾರ ಮಳೆ ಮುಂದುವರೆದರೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗುವುದು ಗ್ಯಾರಂಟಿಯಾಗಲಿದೆ. ಇದನ್ನೂ ಓದಿ: ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವುದೇ ಇವನ ಖಯಾಲಿ
Advertisement