ಕಲಬುರಗಿ: ಗುಲಬರ್ಗಾ ವಿವಿ (Gulbarga University) ಕುಲಪತಿಗೆ ದುಷ್ಕರ್ಮಿಗಳು ಆ್ಯಸಿಡ್ ಹಾಕುವ ಬೆದರಿಕೆ ಪತ್ರ ಕಳಿಸಿದ್ದಾರೆ. ಶಶಿಕಾಂತ್ ಎಸ್.ಉಡಿಕೇರಿ ಅವರಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ಬಿಇಡಿ (BED) ಪರೀಕ್ಷೆಯ ಮರು ಮೌಲ್ಯಮಾಪನದ ನಿರ್ಧಾರ (Re-Evaluation) ನಮಗೆ ಇಷ್ಟವಾಗಿಲ್ಲ. ಎರಡು ಲಕ್ಷ ರೂ. ನೀಡಿ ಬಿಇಡ್ ಪ್ರವೇಶ ಪಡೆದು, ಎರಡು ವರ್ಷದಿಂದ ಫಲಿತಾಂಶಕ್ಕಾಗಿ ಕಾದಿದ್ದೇವೆ. ಮರು ಮೌಲ್ಯಮಾಪನದಿಂದ ಫಲಿತಾಂಶದಲ್ಲಿ ಅಂಕಗಳು ಕಡಿಮೆಯಾದ್ರೆ ಅಥವಾ ಮರು ಮೌಲ್ಯಮಾಪನದಲ್ಲಿ ಅನುತ್ತೀರ್ಣರಾದರೆ ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ನರಳಿ ಬದುಕುವಂತೆ ಮಾಡುತ್ತೇವೆ ಎಂದು ಬರೆಯಲಾಗಿದೆ. ಅನಾಮಧೇಯ ಪತ್ರದ ವಿಚಾರವಾಗಿ ಕುಲಪತಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಮಲಗಿದ್ದ 6 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ- ಪರಾರಿಯಾಗಿದ್ದ ಆರೋಪಿ ಅರೆಸ್ಟ್
2024 ರಲ್ಲಿ ನಡೆದ ಬಿಇಡ್ ಮೌಲ್ಯಮಾಪನದಲ್ಲಿ ಅಕ್ರಮದ ಬಗ್ಗೆ ಗುರುತಿಸಿ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ವಿಸಿ ತಂದಿದ್ದರು. ಮೌಲ್ಯಮಾಪನದಲ್ಲಿ ಅಕ್ರಮವಾಗಿ ಅಂಕ ತಿದ್ದುಪಡಿ ಮಾಡಿರೋದು ವಿವಿ ಆಂತರಿಕ ಸಮಿತಿ ತನಿಖೆಯಲ್ಲಿ ತಿಳಿದು ಬಂದಿತ್ತು. ಬಳಿಕ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿತ್ತು. ಸಮಿತಿಯ ಆದೇಶದಂತೆ ಮರುಮೌಲ್ಯಮಾಪನ ಪ್ರಕ್ರಿಯೆ ನಡೆದಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಪಡೆದು ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

