– ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ
ಚಾಮರಾಜನಗರ: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಹಣವಿರುವುದುನ್ನು ಪತ್ತೆ ಮಾಡಿದ ಬಿಜೆಪಿ ಕಾರ್ಯಕರ್ತರು ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.
ಮನೋಜ್ ಬಂಧಿತ ಆರೋಪಿ. ಗುಂಡ್ಲುಪೇಟೆಯ ಖಾಸಗಿ ಹೋಟೆಲ್ ಮುಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಹಣವಿರುವ ಕುರಿತು ಬಿಜೆಪಿ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿತ್ತು.
Advertisement
Advertisement
ಕೂಡಲೇ ಕಾರ್ಯಕರ್ತರು ಕಾರಿನ ಬಳಿ ತೆರಳಿದಾಗ 2 ಸಾವಿರದ 20 ಕಂತೆ ಕಾರಿನಲ್ಲಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾರಿನಲ್ಲಿ ಒಟ್ಟು 4 ಜನ ಇದ್ರು. ಅದರಲ್ಲಿ ಮೂವರು ಓಡಿ ಹೋಗಿದ್ದಾರೆ. ಮನೋಜ್‍ನನ್ನು ಕಾರ್ಯಕರ್ತರು ಹಿಡಿದಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ನಗರ ಪೊಲೀಸರು ಕಾರನ್ನು ಬಚಾವ್ ಮಾಡಲು ಯತ್ನಿಸಿದ್ದಾರೆ. ಆದ್ರೆ ಬಿಜೆಪಿ ಕಾರ್ಯಕರ್ತರು ಮನೋಜ್‍ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದ್ರೆ ಈ ಹಣ ಕಾಂಗ್ರೆಸ್ ನವರದ್ದು ಅಂತಾ ಆರೋಪ ವ್ಯಕ್ತವಾಗುತ್ತಿದೆ.
Advertisement
ಪೋಲಿಸರಿಂದ ಹಲ್ಲೆ: ಮನೋಜ್‍ನನ್ನು ಪೊಲೀಸರಿಗೆ ಹಿಡಿದು ಕೊಟ್ಟ ಬಿಜೆಪಿ ಕಾರ್ಯಕರ್ತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
Advertisement
ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸ್ ಪೇದೆ ಮಲ್ಲು ಮತ್ತು ವೆಂಕಟೇಶ್ ಬಿಜೆಪಿ ಕಾರ್ಯಕರ್ತ ಚಂದ್ರು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರಿಗೆ ಹಿಡಿದು ಕೊಟ್ಟ ಬಳಿಕ ಪೊಲೀಸರು ಆರೋಪಿ ವಿರುದ್ಧ ನಾಲ್ಕೂವರೆ ಲಕ್ಷ ರೂ. ಬದಲು ಕೇವಲ 12, 500 ರೂ. ಅಂತಾ ಬರೆದುಕೊಂಡಿದ್ದರು. ಇದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಬ್ಬರು ಮೊಬೈಲ್ ಕಸಿದು ವೀಡಿಯೋ ಡಿಲಿಟ್ ಮಾಡಿ ಬಳಿಕ ಹಲ್ಲೆ ಮಾಡಿದ್ದಾರೆ. ಇದರಿಂದ ಕೆರಳಿದ ಕಾರ್ಯಕರ್ತರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ವಿಡಿಯೋ ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿತ್ತು.