ರಾಯ್ಪುರ: ಶನಿವಾರ ಛತ್ತೀಸ್‌ಗಢದ (Chattisgarh) ಕಂಕೇರ್ (Kanker) ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ (Security Personnel) ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ನಕ್ಸಲರು (Naxals) ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಪೊಲೀಸ್ ಪಡೆಯ ಒಂದು ಘಟಕವಾದ ಜಿಲ್ಲಾ ರಿಸರ್ವ್ ಗಾರ್ಡ್ (DRG) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಂದರ್ಭ ಕೊಯಲಿಬೀಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗುಂಡಿನ ಚಕಮಕಿ ಸಂಭವಿಸಿದೆ ಎಂದು ಇನ್ಸ್ಪೆಕ್ಟರ್ ಜನರಲ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಿಸ್ ಮಹಿಳೆಯನ್ನು ದೆಹಲಿಗೆ ಕರೆಸಿ ಹತ್ಯೆ ಮಾಡಿದ ಸ್ನೇಹಿತ
- Advertisement -
- Advertisement -
ಘಟನೆಯ ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಇನ್ಸಾಸ್ ರೈಫಲ್, ಒಂದು 12 ಬೋರ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್
- Advertisement -
- Advertisement -
ನಕ್ಸಲರ ಗುರುತನ್ನು ಇನ್ನೂ ಪತ್ತೆಹಚ್ಚಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ
Web Stories