ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್‌ನಲ್ಲಿ (Anantnag) ಭಾನುವಾರ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು (Terrorists) ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳ ಶೋಧ ಕಾರ್ಯದ ವೇಳೆ ಉಗ್ರರು ಅಡಗಲು ಬಳಸುತ್ತಿದ್ದ ಸುರಂಗ ಮಾರ್ಗ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಹಾಗೂ ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಯ ಜಂಟಿ ತಂಡ ಅನಂತ್‌ನಾಗ್‌ನ ಸಾಗಮ್‌ಗೆ ತೆರಳಿ ಶೋಧ ಕಾರ್ಯ ನಡೆಸಿದೆ.
Advertisement
Advertisement
Advertisement
ಈ ವೇಳೆ ಭದ್ರತಾ ಪಡೆಗಳು ಉಗ್ರರು ಒಳನುಸುಳಲು ಹಾಗೂ ಅಡಗಲು ಬಳಸುತ್ತಿದ್ದ ಸುರಂಗ ಮಾರ್ಗವನ್ನು ಭೇದಿಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಅನಂತ್‌ನಾಗ್ ಅಂಧ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸ್ ಹಾಗೂ ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಬರೆದಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಮಯ ಹಿಡಿಯಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಹಿಂದೆ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಮನೆಗಳಲ್ಲಿ ಅಡಗಿಕೊಂಡಿರುತ್ತಿದ್ದರು. ಬಳಿಕ ಭದ್ರತಾ ಪಡೆಗಳು ಉಗ್ರರು ನೆಲೆಸುತ್ತಿದ್ದಂತಹ ಮನೆಗಳನ್ನು ಭೇದಿಸಿ ಅವುಗಳನ್ನು ಧ್ವಂಸಗೊಳಿಸಿದ್ದಾರೆ. ಇದೀಗ ಉಗ್ರರು ಸುರಂಗ ಮಾರ್ಗಗಳನ್ನು ಕೊರೆದು ಅವುಗಳಲ್ಲಿ ಒಳನುಸುಳುವುಕೆ ಹಾಗೂ ಅಡಗುತಾಣವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪತಿಯನ್ನು ಕೊಂದು ಸ್ನೇಹಿತರಿಗೆ ಪಾರ್ಟಿ ಕೊಟ್ಟಿದ್ದ ಕಿಲ್ಲರ್ ಲೇಡಿ