ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ, ಬೆದರಿಕೆ

Public TV
1 Min Read
Lionel Messi

ಬ್ಯೂನಸ್ ಐರಿಸ್: ಫಿಫಾ ವಿಶ್ವಕಪ್ (FIFA WorldCup) ವಿಜೇತ, ಅಜೆಂಟಿನಾ ಫುಟ್ಬಾಲ್ ತಂಡದ ನಾಯಕ ಲಿಯೋನಲ್ ಮೆಸ್ಸಿ (Lionel Messi) ಅವರ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೆಸ್ಸಿಗೂ ಬೆದರಿಕೆ ನೀಡಿದ್ದಾರೆ.

ರಾತ್ರೋ ರಾತ್ರಿ ಬಂದ ಇಬ್ಬರು ಬಂದೂಕುದಾರಿಗಳು ಸೂಪರ್ ಮಾರ್ಕೆಟ್ (Messi Super Market) ಮುಂಭಾಗಕ್ಕೆ 14 ಗುಂಡುಗಳನ್ನು ಹಾರಿಸಿದ್ದಾರೆ. ಜೊತೆಗೆ `ಮೆಸ್ಸಿ, ನಾವು ನಿಮಗಾಗಿ ಕಾಯುತ್ತಿದ್ದೇವೆ. ಜಾವ್ಕಿನ್ ಒಬ್ಬ ನಾರ್ಕೋ, ಅವನು… ನಿನ್ನನ್ನ ನೋಡಿಕೊಳ್ಳುವುದಿಲ್ಲ’ ಎಂದು ಕೈಬರಹ ಸಂದೇಶವನ್ನು ಬರೆದುಹೋಗಿದ್ದಾರೆ. ಆ ಸಮಯದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.

Shoot Out

ಪಾಬ್ಲೊ ಜಾವ್ಕಿನ್ ಅವರು ಮೆಸ್ಸಿಯ ತವರು ರೊಸಾರಿಯೊದ ಮೇಯರ್ ಆಗಿದ್ದಾರೆ. ಅಲ್ಲಿ ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಇದೆ. ಇದು ರಾಜಧಾನಿ ಬ್ಯೂನಸ್ ಐರಿಸ್ ನಿಂದ ವಾಯುವ್ಯಕ್ಕೆ 320 ಕಿಮೀ ದೂರದಲ್ಲಿದೆ.

ಇಬ್ಬರು ವ್ಯಕ್ತಿಗಳು 3 ಗಂಟೆ ಸುಮಾರಿಗೆ ಮೋಟಾರ್ ಬೈಕ್‌ನಲ್ಲಿ ಬಂದಿರುವುದನ್ನು ಪ್ರತ್ಯಕ್ಷದರ್ಶಿಗಳು ದೃಢಪಡಿಸಿದ್ದಾರೆ. ಅವರಲ್ಲಿ ಒಬ್ಬರು ಇಳಿದು ಗುಂಡು ಹಾರಿಸಿದ ಎಂದಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು (Police) ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: WPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ಬಾಲಿವುಡ್ ತಾರೆಯರು

Lionel Messi

ರೊಸಾರಿಯೊ ಪರಾನಾ ನದಿಯ ಬಂದರು ನಗರವಾಗಿದೆ. ಇದೀಗ ಮಾದಕವಸ್ತು ಕಳ್ಳಸಾಗಣೆಯ ಕೇಂದ್ರವಾಗಿ ಮಾರ್ಪಟ್ಟಿದ್ದು, ಅರ್ಜೆಂಟಿನಾದ ಅತ್ಯಂತ ಹಿಂಸಾತ್ಮಕ ನಗರ ಎನಿಸಿಕೊಂಡಿದೆ. 2022ರಲ್ಲಿಯೂ ಈ ನಗರದಲ್ಲಿ 287 ಹತ್ಯೆಗಳು ನಡೆದಿವೆ. ಇದನ್ನೂ ಓದಿ: ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

Share This Article
Leave a Comment

Leave a Reply

Your email address will not be published. Required fields are marked *