ಅಬುಜಾ: ನೈರುತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ ಮೇಲೆ ಬಂದೂಕುಧಾರಿಯೋರ್ವ ಸಾಮೂಹಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಗಾಯಗೊಂಡಿದ್ದಾರೆ.
Advertisement
ಭಾನುವಾರ ಬೆಳಗಿನ ಜಾವ ಚರ್ಚ್‍ನಲ್ಲಿ ಪ್ರಾರ್ಥನೆ ಮಾಡಲು ಅನೇಕ ಮಂದಿ ಆಗಮಿಸಿದ್ದರು. ಈ ವೇಳೆ ಮುತ್ತಿಗೆ ಹಾಕಿ ಬಂದೂಕುಧಾರಿ ಆರಂಭದಲ್ಲಿ ಹೊರಗಡೆ ದಾಳಿ ನಡೆಸಿ ನಂತ ಒಳಗಡೆ ದಾಳಿ ನಡೆಸಿದ್ದಾನೆ. ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಮನೆಬಂದಂತೆ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 16 ದಿನಗಳ ಬಳಿಕ ಕೊರೊನಾಗೆ ಮಹಿಳೆ ಬಲಿ
Advertisement
I was at the scene of the terror attack on innocent worshipers at St. Francis Catholic Church in Owo, today. I also visited the hospitals where survivors of the attack are receiving medical attention.
The attack was the most dastardly act that could happen in any society. pic.twitter.com/I8xv80CTfL
— Arakunrin Akeredolu (@RotimiAkeredolu) June 5, 2022
Advertisement
ಈ ಘಟನೆ ಕುರಿತಂತೆ ಪ್ರತಿಕ್ರಿಯಿಸಿದ ಒಂಡೋ ರಾಜ್ಯದ ಪೊಲೀಸ್ ವಕ್ತಾರ ಫನ್ಮಿಲಾಯೊ ಇಬುಕುನ್ ಒಡುನ್ಲಾಮಿ, ಬಂದೂಕುಧಾರಿ ಚರ್ಚ್ ಕಟ್ಟಡದ ಹೊರಗೆ ಮತ್ತು ಒಳಗೆ ಜನರ ಮೇಲೆ ಗುಂಡು ಹಾರಿಸಿದ್ದಾನೆ. ಸದ್ಯ ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಯಾರು ಎನ್ನುವುದು ತಿಳಿದು ಬಂದಿಲ್ಲ ಇದನ್ನೂ ಓದಿ: ಕೇರಳದಲ್ಲಿ ಎರಡು ನೊರೊವೈರಸ್ ಪ್ರಕರಣ ಪತ್ತೆ
Advertisement
ನಂತರ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಒಂಡೋ ರಾಜ್ಯ ಗವರ್ನರ್ ಅರಕುನ್ರಿನ್ ಒಲುವರೊಟಿಮಿ ಅಕೆರೆಡೊಲು ಅವರು, ಇದೊಂದು ದೊಡ್ಡ ಹತ್ಯಾಕಾಂಡ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.