ಚಂಡೀಗಢ: 19 ವರ್ಷದ ಯುವತಿ ಮೇಲೆ ಆಕೆಯ ಪ್ರಿಯಕರನೇ ಗುಂಡು ಹಾರಿಸಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಐಎಂಟಿ ಮನೇಸರ್ ಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಯುವತಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಮಹಿಳೆ ಕೆಲಸಕ್ಕೆ ಹೋಗುತ್ತಿದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಯನ್ನು ಅಭಯ್ ಶರ್ಮಾ ಎಂದು ಗುರುತಿಸಲಾಗಿದ್ದು, ಈತ ತನ್ನ ಶಾಲಾ ದಿನಗಳಿಂದಲೂ ಯುವತಿಯನ್ನು ಇಷ್ಟಪಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್
ಶನಿವಾರ ಬೈಕ್ನಲ್ಲಿ ಬಂದು ಯುವತಿಯನ್ನು ಅಡ್ಡಹಾಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿ ಮಾತನಾಡಲು ನಿರಾಕರಿಸಿದ್ದರಿಂದ ಬಂದೂಕನ್ನು ಹೊರತೆಗೆದು ಗುಂಡು ಹಾರಿಸಿದ್ದಾನೆ. ಘಟನೆ ವೇಳೆ ಯುವತಿ ಕುತ್ತಿಗೆಗೆ ಗುಂಡು ತಗುಲಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯದಲ್ಲಿ ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೋರ್ವ ಆರೋಪಿ ಬಂದಿದ್ದ ಬೈಕ್ ಅನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಇದು ಮಂಗಗಳ ನೃತ್ಯ – ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ
ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ಹೇಳಿಕೆಯ ಮೇರೆಗೆ ಆರೋಪಿ ವಿರುದ್ಧ ಕೊಲೆ ಯತ್ನದ ಎಫ್ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲಿಯೇ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಮನೇಸರ್ ಪೊಲೀಸ್ ಠಾಣೆಯ ಎಸ್ಎಚ್ಒ ಸುಭಾಷ್ ಚಂದ್ ತಿಳಿಸಿದ್ದಾರೆ.