ನವದೆಹಲಿ: 60 ವರ್ಷದ ಮಹಿಳೆ ಮೇಲೆ ಆಕೆಯ ಮಗನೇ ಇಟ್ಟಿಗೆಯಿಂದ ಹಲ್ಲೆ ನಡೆಸಿ, ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಿಂದ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆರೋಪಿ ಕಡಲೆಕಾಯಿ ವ್ಯಾಪಾರಿಯಾಗಿದ್ದು, ಪೋಷಕರನ್ನು ಬಿಟ್ಟು, ತನ್ನ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳೊಂದಿಗೆ ಗುರುಗ್ರಾಮ್ ಸೆಕ್ಟರ್ 11ರ ಗಾಂಧಿ ನಗರದಲ್ಲಿ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ. ಇದನ್ನೂ ಓದಿ: ಭಾರತದಲ್ಲಿ ಶೇ.75 ವಯಸ್ಕರಿಗೆ ಎರಡೂ ಡೋಸ್ ಲಸಿಕೆ – ಪ್ರಧಾನಿ ಅಭಿನಂದನೆ
Advertisement
Advertisement
ಆರೋಪಿಯ 30 ವರ್ಷದ ಸಹೋದರಿ ಮದುವೆ ಮುಂದಿನ ತಿಂಗಳು ನಿಶ್ಚಯವಾಗಿದ್ದು, ಶುಕ್ರವಾರ ತನ್ನ ಪೋಷಕರ ಮನೆಗೆ ಆಗಮಿಸಿ ತಂಗಿಗೆ ಆಯ್ಕೆ ಮಾಡಿರುವ ವರ ಒಳ್ಳೆಯವನಲ್ಲ ಎಂದು ಜಗಳವಾಡಿದ್ದಾನೆ. ನಂತರ ತನ್ನ ತಾಯಿಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿರುವುದಾಗಿ ಆತನ ಸಹೋದರಿ ಆರೋಪಿಸಿದ್ದಾರೆ.
Advertisement
ನಂತರ ಘಟನೆಯಲ್ಲಿ ಗಾಯಗೊಂಡ ತಾಯಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರಿಂದ ಬಂಧನಕ್ಕೊಳಗಾಗುವ ಭಯದಿಂದ ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿಯೇ ಆತ ವಿಷ ಸೇವಿಸಿದ್ದಾನೆ. ಇದನ್ನೂ ಓದಿ: ಸ್ವಪಕ್ಷೀಯ ಶಾಸಕರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ – ಮುಂದುವರಿದ ಟಾಕ್‌ವಾರ್
Advertisement
ಬಳಿಕ ಆತನನ್ನು ಗುರುಗ್ರಾಮ್‍ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದ್ದರಿಂದ ಬಳಿಕ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತನ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.