ಹಾವೇರಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗುರುಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ (Kerala) ಎರಿಮಲೈನಲ್ಲಿ ನಡೆದಿದೆ.
ಹಾವೇರಿಯ (Haveri) ಹಾನಗಲ್ (Hanagal) ಪಟ್ಟಣದ ನಿವಾಸಿ ಮಾರುತಿ ಎಂ ಹರಿಹರ(51) ಮೃತ ಗುರುಸ್ವಾಮಿ. ಇದನ್ನೂ ಓದಿ: ಮಲ್ಪೆಯ ಟಾಯ್ಲೆಟ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ
ಹಿರೇಕಣಗಿ ಸೇರಿ ಹಾನಗಲ್ ತಾಲೂಕಿನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಿನಿ ಬಸ್ ಮಾಡಿಕೊಂಡು ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದೆ. ಪರಿಣಾಮ ಓರ್ವ ಗುರುಸ್ವಾಮಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 20 ಜನರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಯುವಕನೊಂದಿಗೆ ಆಂಟಿ ಲವ್ವಿಡವ್ವಿ – ರೀಲ್ಸ್ ಪ್ರಿಯನಿಗಾಗಿ ಗಂಡನಿಗೇ ಚಟ್ಟ ಕಟ್ಟಿದ ಪತ್ನಿ
ರಾಜ್ಯ ಸರ್ಕಾರವು ಕೇರಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದೆ. ಅಲ್ಲದೇ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ, ಮೃತದೇಹವನ್ನು ತರುವ ವ್ಯವಸ್ಥೆ ಮಾಡಿದ್ದಾರೆ.