LatestMain PostNational

ಏಮ್ಸ್ ಆಸ್ಪತ್ರೆಯ ಏಳನೇ ಮಹಡಿಯಿಂದ ಬಿದ್ದು ವೈದ್ಯ ಸಾವು

Advertisements

ಡಿಸ್ಪುರ್: ಅಸ್ಸಾಂನ ಕಮ್ರೂಪ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ನ ಏಳನೇ ಮಹಡಿಯಿಂದ ಬಿದ್ದು ವೈದ್ಯರೊಬ್ಬರು ಬುಧವಾರ ಸಾವನ್ನಪ್ಪಿದ್ದಾರೆ.

crime

ಭಾರೀ ಶಬ್ಧ ಕೇಳಿದ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಕಾರ್ಮಿಕರು ಸ್ಥಳಕ್ಕೆ ಧಾವಿಸಿ ನೋಡಿದಾಗ ವೈದ್ಯರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಗೆ ವೈದ್ಯರನ್ನು ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

CRIME 2

ಮೃತ ದುರ್ದೈವಿಯನ್ನು ಫಾಲ್ಗು ಪ್ರತಿಮ್ ದಾಸ್ ಎಂದು ಗುರುತಿಸಲಾಗಿದೆ. ಘಟನೆ ಕುರಿತಂತೆ ತನಿಖೆ ವೇಳೆ ವೈದ್ಯ ಏಳನೇ ಮಹಡಿಯಿಂದ ಕೆಳಗೆ ಬಿದ್ದಿರುವುದು ತಿಳಿದುಬಂದಿದೆ. ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುವುದರ ಬಗ್ಗೆ ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಐಐಎಂಎಸ್ ಅನ್ನು ಇನ್ನೂ ಅಧಿಕೃತವಗಿ ತೆರೆದಿಲ್ಲ. ಗುವಾಹಟಿಯಿಂದ ಸುಮಾರು 25.5 ಕಿಮೀ ದೂರದಲ್ಲಿರುವ ಚಾಂಗ್ಸಾರಿಯಲ್ಲಿರುವ ಸಂಸ್ಥೆಯಲ್ಲಿ ತರಗತಿಗಳು ಪ್ರಾರಂಭವಾಗಿವೆ. ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿಯಿಂದಲೇ ದೂರು

Leave a Reply

Your email address will not be published.

Back to top button