ಕೋಲ್ಕತ್ತಾ: ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಗುವಾಹಟಿ-ಬಿಕನೇರ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದು, ಮೂವರು ಧಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೂವರ ಸಾವಿಗೀಡಾಗಿದ್ದು, ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡಿದ್ದ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ 30 ಆಂಬುಲೆನ್ಸ್‌ಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ
Advertisement
Advertisement
ಅಪಘಾತ ಕುರಿತು ಉನ್ನತ ಮಟ್ಟದ ರೈಲ್ವೆ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಡಿಜಿ ದೆಹಲಿಯಿಂದ ಅಪಘಾತ ಸ್ಥಳಕ್ಕೆ ತೆರಳಿದ್ದಾರೆ.
Advertisement
ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ಘೋಷಿಸಲಾಗಿದೆ. ಇದನ್ನೂ ಓದಿ: ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ – ನಟ ದಿಲೀಪ್ ಮನೆ ಮೇಲೆ ಕೇರಳ ಪೊಲೀಸರ ದಾಳಿ
Advertisement
ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಒಂದು ಬೋಗಿ ಮಗುಚಿ ಬಿದ್ದಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಮೂಲಗಳು ತಿಳಿಸಿವೆ.