ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (Chief Election Commissioner) ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ (Rajiv Kumar) ಅವರ ಸ್ಥಾನವನ್ನು ತುಂಬಲಿದ್ದಾರೆ.
Advertisement
ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಅವರಿಗೆ ಮಂಗಳವಾರ 65 ವರ್ಷ ಪೂರ್ಣಗೊಳ್ಳಲಿವೆ. ರಾಜೀವ್ ಕುಮಾರ್ ಇಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಆಯ್ಕೆ ಸಮಿತಿಯು ಹೆಸರು ಅಂತಿಮಗೊಳಿಸಲು ಸೋಮವಾರ ಸಭೆ ನಡೆಸಿತ್ತು.
Advertisement
ಈ ಸಭೆಯಲ್ಲಿ ಕೇದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಿದ್ದರು. ಸಿಇಸಿ ಹಾಗೂ ಚುನಾವಣಾ ಆಯುಕ್ತರ ನೇಮಕ ಕುರಿತ ಹೊಸ ನೇಮಕಾತಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕೆಲವೇ ದಿನಗಳಲ್ಲಿ ವಿಚಾರಣೆ ನಡೆಸಲಿದ್ದು, ಫೆಬ್ರವರಿ 19ರವರೆಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಹುಲ್ ಗಾಂಧಿ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ವಿರೋಧದ ನಡುವೆಯೂ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ.
Advertisement
1989 ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ ಅಧಿಕಾರಿ ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಇದನ್ನೂ ಓದಿ: ಬ್ಯಾನ್ ಆದ ಚೀನಿ ಡ್ರೋನ್ ಹಾರಿಸಿ ವಿವಾದ ಮೈಮೇಲೆ ಎಳೆದುಕೊಂಡ ರಾಹುಲ್ ಗಾಂಧಿ
Advertisement
ಕೇಂದ್ರ ಗೃಹ ಸಚಿವಾಲಯದ ಭಾಗವಾಗಿದ್ದ ಜ್ಞಾನೇಶ್ ಕುಮಾರ್ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುಮಾರ್ ಅವರು ಮಾರ್ಚ್ 15, 2024 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.
ಜನವರಿ 26, 2029 ರವರೆಗೆ ಹುದ್ದೆಯಲ್ಲಿರುವ ಜ್ಞಾನೇಶ್ ಕುಮಾರ್ ಅವರು ಮುಂದೆ 20 ವಿಧಾನಸಭಾ ಚುನಾವಣೆಗಳು, 2027 ರಲ್ಲಿ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಚುನಾವಣೆಗಳು ಮತ್ತು 2029 ರ ಲೋಕಸಭಾ ಚುನಾವಣೆಯ ಸಿದ್ಧತೆಗಳ ಮೂಲಕ ಆಯೋಗವನ್ನು ಸಂಪೂರ್ಣವಾಗಿ ಮುನ್ನಡೆಸಲಿದ್ದಾರೆ.
2023 ರಲ್ಲಿ ಸಂಸತ್ತು ಕಾಯ್ದೆ ರಚನೆಯಾಗುವ ಮೊದಲು ಪ್ರಧಾನಿಯ ಸಲಹೆಯ ಮೇರೆಗೆ ಭಾರತದ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುತ್ತಿದ್ದರು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ 2023 ರ ಅಡಿಯಲ್ಲಿ ಕಾನೂನು ಸಚಿವರ ನೇತೃತ್ವದ ಸಮಿತಿಯು ಐದು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಅಂತಿಮವಾಗಿ ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರು ಅಂತಿಮವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ.