ಲಕ್ನೋ: ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ (Gyanvapi Mosque Suit) ಹಿಂದೂ ಮಂದಿರ ಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೋರಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ (Allahabad High Court) ವಜಾಗೊಳಿಸಿದೆ.
ಉತ್ತರ ಪ್ರದೇಶದ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿದ ಐದು ಅರ್ಜಿಗಳನ್ನು ವಜಾಗೊಳಿಸಿದ ಕೋರ್ಟ್ ಜ್ಞಾನವಾಪಿ ವಿವಾದದಲ್ಲಿನ ಅರ್ಜಿಯನ್ನು ಪೂಜಾ ಸ್ಥಳಗಳ ಕಾಯ್ದೆಯ (Places of Worship Act) ನಿಬಂಧನೆಗಳಿಂದ ತಡೆಯುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಬರಬೇಡಿ – ಅಡ್ವಾಣಿ, ಜೋಶಿಯಲ್ಲಿ ಮನವಿ – ಬರಲಿರುವ VIP ಗಣ್ಯರು ಯಾರು?
Advertisement
ಈ ಪ್ರಕರಣವು ರಾಷ್ಟ್ರೀಯ ಪ್ರಾಮುಖ್ಯತೆ ಮತ್ತು ದೇಶದ ಎರಡು ಪ್ರಮುಖ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಷ್ಟೇ ಅಲ್ಲದೇ ಆರು ತಿಂಗಳೊಳಗೆ ವಿಷಯವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಮುಕ್ತಾಯಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
Advertisement
Advertisement
ಪೂಜಾ ಸ್ಥಳಗಳ ಕಾಯ್ದೆ “ಧಾರ್ಮಿಕ ಸ್ವರೂಪ” ವನ್ನು ವ್ಯಾಖ್ಯಾನಿಸುವುದಿಲ್ಲ. “ಮತಾಂತರ” ಮತ್ತು “ಆರಾಧನಾ ಸ್ಥಳ”ಗಳನ್ನು ಮಾತ್ರ ಕಾಯಿದೆಯಡಿಯಲ್ಲಿ ವ್ಯಾಖ್ಯಾನಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ವಿವಾದಿತ ಸ್ಥಳದ ಧಾರ್ಮಿಕ ಸ್ವರೂಪ ಏನು ಎಂಬುದಕ್ಕೆ ಕಕ್ಷಿದಾರರು ನೀಡಿದ ಪುರಾವೆಯ ನಂತರವೇ ನ್ಯಾಯಾಲಯವು ತೀರ್ಮಾನ ತೆಗೆದುಕೊಳ್ಳಬಹುದು. ಅಗತ್ಯವಿದ್ದಲ್ಲಿ ಎಎಸ್‌ಐ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
Advertisement
ಮಸೀದಿ ಪರ ವಕೀಲರ ವಾದ ಏನಿತ್ತು?
1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು ಮತ್ತು ಅದರ ಸ್ವರೂಪವನ್ನು ಬದಲಾಯಿಸುವುದಕ್ಕಾಗಿ ಯಾವುದೇ ನ್ಯಾಯಾಲಯದಲ್ಲಿ ದಾವೆ ಹೂಡುವುದಕ್ಕೆ ಅವಕಾಶ ಇಲ್ಲ ಎಂದು ಅಂಜುಮಾನ್ ಮಸೀದಿಯ ಪರ ವಕೀಲರು ವಾದಿಸಿದ್ದರು.
ಹಿಂದೆ ವಾರಣಾಸಿ ಕೋರ್ಟ್ ಹೇಳಿದ್ದು ಏನು?
ಮಸೀದಿ ಒಳಗಡೆ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ 1993ರ ವರೆಗೆ ಪೂಜೆ ಮಾಡಲು ಅವಕಾಶವಿತ್ತು. ಆದರೆ 1993ರ ನಂತರ ಉತ್ತರ ಪ್ರದೇಶ ಸರ್ಕಾರ ನಿಯಂತ್ರಣದ ಅಡಿ ವರ್ಷಕ್ಕೆ ಒಂದು ಬಾರಿ ಪೂಜೆ ಸಲ್ಲಿಸಲಾಗುತ್ತಿದೆ ಎಂದಿದ್ದಾರೆ. ಹೀಗಾಗಿ ವಿವಾದಿತ ಜಾಗದಲ್ಲಿ 1947ರ ಆಗಸ್ಟ್ 15 ರ ನಂತರವೂ ಪೂಜೆ ಸಲ್ಲಿಕೆಗೆ ಅನುಮತಿ ಇದ್ದ ಕಾರಣ 1991ರ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಯ ಒಳಗಡೆ ಬರುವುದಿಲ್ಲ. ನ್ಯಾಯಾಲಯದಲ್ಲಿ ದಾವೆ ಹೂಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು 2022ರ ಸೆಪ್ಟೆಂಬರ್‌ನಲ್ಲಿ ವಾರಣಾಸಿ ಜಿಲ್ಲಾ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.
1991ರ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿದೆ ಅರ್ಜಿ
ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಮತ್ತು ಇತರರು 1991ರ ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯಲ್ಲಿರುವ ವಿವಿಧ ಅವಕಾಶಗಳ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಹಲವು ಕಾರಣಗಳಿಂದಾಗಿ ಕಾಯ್ದೆಯ ಅಸಾಂವಿಧಾನಿಕವಾಗಿದೆ. ಹಿಂದೂ, ಜೈನ, ಬೌದ್ಧ ಮತ್ತು ಸಿಖ್ಖರ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆ ಸ್ಥಳಗಳನ್ನು ನಿರ್ವಹಿಸುವ ಹಕ್ಕನ್ನು ಈ ಕಾಯ್ದೆಯಿಂದ ನಿರ್ಬಂಧಿಸಲಾಗಿದೆ.