ರಾಮನಗರ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಅವಕಾಶ ಕೊಟ್ಟಿದ್ದನ್ನು ವಿರೋಧಿಸಿ, ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ರಾಮನಗರ (Ramanagara) ಮೂಲದ ವಕೀಲನನ್ನ (Lawyer) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ವಕೀಲನನ್ನು ಚಾನ್ ಪಾಷ ಎಂದು ಗುರುತಿಸಲಾಗಿದೆ. ಆರೋಪಿ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ವಿಚಾರಕ್ಕೆ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಪೋಸ್ಟ್‍ನಲ್ಲಿ ನ್ಯಾಯಾಧೀಶರನ್ನು ನಾಲಾಯಕ್, ಭ್ರಷ್ಟ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್
Advertisement
Advertisement
ಈ ಸಂಬಂಧ ಹಿಂದೂಪರ ಕಾರ್ಯಕರ್ತರು ಹಾಗೂ ಕೆಲ ವಕೀಲರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ನ್ಯಾಯಾಂಗ ನಿಂದನೆ (Contempt Of Court) ಆರೋಪದಡಿ ಚಾನ್ ಪಾಷನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: 15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ
Advertisement