ಲಕ್ನೋ: ಜ್ಞಾನವಾಪಿ ಮಸೀದಿ (Gyanvapi Mosque) ಆವರಣದಲ್ಲಿ ನಡೆಸಿದ ಸರ್ವೆ ವೇಳೆ ಪತ್ತೆಯಾದ ವಸ್ತು ಶಿವಲಿಂಗವೇ ಅಥವಾ ನೀರಿನ ಕಾರಂಜಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈಜ್ಞಾನಿಕ ತನಿಖೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪರ ಅರ್ಜಿದಾರರು ಸಲ್ಲಿಸಿದ್ದ ಮನವಿಯ ತೀರ್ಪನ್ನು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ಮುಂದೂಡಿದೆ.
ಪ್ರಕರಣ ತೀರ್ಪನ್ನು ಅಕ್ಟೋಬರ್ 11 ರಂದು ನೀಡಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶ ಡಾ. ಎ.ಕೆ.ವಿಶ್ವೇಶ ಅವರು ಹೇಳಿದರು. ಮಸೀದಿ ಸಮಿತಿ ಪರ ವಕೀಲರು ಇಂದು ಆಕ್ಷೇಪ ವ್ಯಕ್ತಪಡಿಸಿದರು. ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು (Shivlinga) ಮೂಲ ಪ್ರಕರಣ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಶಿವಲಿಂಗ ರೂಪದ ಈ ಪಳಿಯುಳಿಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೋರಿಕೊಂಡರು. ಇದನ್ನೂ ಓದಿ: ರಾವಣನ ಪ್ರತಿಕೃತಿಯ ತಲೆಗಳು ಸುಟ್ಟುಹೋಗದಕ್ಕೆ ನೌಕರ ಅಮಾನತು
Advertisement
Advertisement
ಇದಕ್ಕೆ ಒಪ್ಪಿಕೊಂಡ ನ್ಯಾಯಾಧೀಶರು ತೀರ್ಪಿನ ದಿನಾಂಕವನ್ನು ಮುಂದೂಡಿದರು. ಮಸೀದಿ ಸಮಿತಿಯ ವಕೀಲರ ವಾದ ಆಲಿಸಿದ ಬಳಿಕ ಕೋರ್ಟ್ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಅಕ್ಟೋಬರ್ 11 ರೊಳಗೆ ಈ ಬಗ್ಗೆ ಮಸೀದಿಯ ಸಮಿತಿಯ ವಕೀಲರು ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಲಿದ್ದಾರೆ.
Advertisement
Advertisement
ಇದೇ ವೇಳೆ ಕೋರ್ಟ್‌ನಲ್ಲಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಮೂಲ ಪ್ರಕರಣದ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908ರ ಆದೇಶ 26 ನಿಯಮ 10Aರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ (Gyanvapi Case) ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದರು. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR