ಲಕ್ನೋ: ಅಲಹಾಬಾದ್ ಕೋರ್ಟ್ (Allahabad Court) ನಿರ್ದೇಶನದ ಮೇರೆಗೆ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿದ್ದ ವೈಜ್ಞಾನಿಕ ಸಮೀಕ್ಷಾ ವರದಿ ಬಹಿರಂಗಗೊಂಡಿದೆ.
ಜ್ಞಾನವಾಪಿ ಮಸೀದಿ ಜಾಗದಲ್ಲಿ ಮೊದಲು ಹಿಂದೂ ದೇವಾಲಯ (Hindu Temple) ಇತ್ತು ಅಂತಾ ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಕೋರ್ಟ್ ಆದೇಶದನ್ವಯ ವರದಿ ಪಡೆದಿರುವ ಅವರು ಸುದ್ದಿಗೋಷ್ಠಿ ನಡೆಸಿ ವರದಿಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಮಸೀದಿಗಿಂತ ಮುಂಚೆ ದೊಡ್ಡ ಹಿಂದೂ ದೇವಾಲಯದ ರಚನೆಯನ್ನು ಸರ್ವೆ ವರದಿ ಎತ್ತಿ ತೋರಿಸಿದೆ ಎಂದು ಹೇಳಿದ್ದಾರೆ. ಜನಾರ್ದನ, ರುದ್ರ ಮತ್ತು ಉಮೇಶ್ವರ ಮುಂತಾದ ಮೂರು ದೇವತೆಗಳ ಹೆಸರುಗಳು ಮಸೀದಿಯಲ್ಲಿ ಲಭ್ಯವಾದ ಶಾಸನಗಳಲ್ಲಿ ಕಂಡುಬರುತ್ತವೆ. ಮಸೀದಿ ಪಶ್ಚಿಮ ಗೋಡೆ ಹಿಂದೆ ನಿರ್ಮಾಣ ಮಾಡಿದ್ದ ಹಿಂದೂ ದೇವಾಲಯದ್ದಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..
Advertisement
Advertisement
ವರದಿಯಲ್ಲಿ ಏನಿದೆ?
ಜ್ಞಾನವಾಪಿ ಮಸೀದಿಗೂ ಮುನ್ನ ದೇವಸ್ಥಾನ ಇತ್ತು. ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. ಸರ್ವೆ ವೇಳೆ ಕಟ್ಟಡದ ರಚನೆಗೆ ಯಾವುದೇ ಹಾನಿ ಉಂಟಾಗಿಲ್ಲ, ಶೋಧಿಸಿದ ಎಲ್ಲಾ ವಸ್ತುಗಳನ್ನು ದಾಖಲಿಸಲಾಗಿದೆ. ವೈಜ್ಞಾನಿಕ ಅಧ್ಯಯನದ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ರಚನೆಯಲ್ಲಿ ಹಿಂದಿನ ರಚನೆಯ ಕಂಬಗಳ ಬಳಕೆಯಾಗಿದೆ. ಸ್ತಂಭಗಳನ್ನು ವ್ಯವಸ್ಥಿತವಾಗಿ ಅಧ್ಯಯನ ಮಾಡಲಾಗಿದೆ. ಇದನ್ನೂ ಓದಿ: ಕನ್ನಡಿಗ ಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್‌ಗೆ ‘ಶೌರ್ಯ ಚಕ್ರ’ ಪ್ರಶಸ್ತಿ ಘೋಷಣೆ
ಹೊಸ ರಚನೆಯ ನಿರ್ಮಾಣದಲ್ಲಿ ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಭಾಗಗಳನ್ನು ಮರುಬಳಕೆ ಮಾಡಲಾಗಿದೆ. ದೇವಾಲಯವು ದೊಡ್ಡ ಕೇಂದ್ರವನ್ನು ಮಸೀದಿಯ ಸಭಾಂಗಣವಾಗಿ ಬಳಸಲಾಗುತ್ತಿದೆ. ಈಗಿರುವ ಮಸೀದಿಯಲ್ಲಿ ಹಿಂದಿನ ರಚನೆಯ 34 ಶಾಸನಗಳನ್ನು ಬಳಸಲಾಗಿದೆ. ಮರು ಬಳಕೆ ವೇಳೆ ಕುರುಹು ನಾಶ ಮಾಡಲಾಗಿದೆ. ಈ ಮಸೀದಿಯನ್ನು ನಿರ್ಮಿಸಲು ದೇವಾಲಯವನ್ನು ನಾಶಪಡಿಸಲಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದು ಸಮೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.