ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗವನ್ನು ಪೂಜಿಸಲು ಅನುಮತಿ ನೀಡಬೇಕಾಗಿ ಕೋರಿ ಇತ್ತೀಚೆಗೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಕೆಲವು ದಿನಗಳ ಹಿಂದೆ 7 ಹಿಂದೂ ಮಹಿಳೆಯರ ಗುಂಪು ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜಸ್ಟಿನ್ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಮನವಿಯನ್ನು ನಿರಾಕರಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ
Advertisement
Advertisement
ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕಾಗಿ ಅರ್ಜಿಯಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್
Advertisement
Advertisement
ಈ ಹಿಂದೆ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರಚನೆಯನ್ನು ಮಸೀದಿಯ ಸಮಿತಿ ಅದು ಶಿವಲಿಂಗವಲ್ಲ, ಕಾರಂಜಿ ಎಂದು ವಾದಿಸಿತ್ತು. ಈ ವಿಚಾರವಾಗಿ ದೇಶಾದ್ಯಂತ ವಿವಾದ ಉಂಟಾಗಿದ್ದು, ಬಳಿಕ ಅಲ್ಲಿನ ಜಿಲ್ಲಾ ನ್ಯಾಯಾಲಯ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಆರಾಧನೆಯ ಹಕ್ಕನ್ನು ನಿರ್ಬಂಧಿಸಿ, ಆ ಸ್ಥಳವನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಕೇಳಿಕೊಂಡಿತ್ತು.