ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಹಡಿಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಶುಕ್ರವಾರದಂದು ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ.
ಬುಧವಾರವಷ್ಟೇ ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಪೂಜೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ನಮಾಜ್‌ಗೆ ಮುಂಚಿತವಾಗಿ ವಾರಣಾಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ ಸಮಿತಿ
- Advertisement -
ಮಸೀದಿಯ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಶುಕ್ರವಾರ ನಮಾಜ್ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಡೆ ಧ್ವಜ ಮೆರವಣಿಗೆ ನಡೆಸುವುದರೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪ್ರಜ್ಞಾ ಪಾಠಕ್ ತಿಳಿಸಿದ್ದಾರೆ.
- Advertisement -
- Advertisement -
ಹೈಕೋರ್ಟ್ ಮೆಟ್ಟಿಲೇರಿದ ಸಮಿತಿ: ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್ (Allahabad High Court) ಮೆಟ್ಟಿಲೇರಿದೆ. ಇದನ್ನೂ ಓದಿ: ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?
- Advertisement -
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‍ಎಫ್‍ಎ ನಖ್ವಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಸೇರಿಸುವಂತೆ ರಿಜಿಸ್ಟ್ರಾರ್ ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.