ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.
ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್
Advertisement
Advertisement
ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ
Advertisement
Advertisement
ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.