– ಸೀಕ್ರೆಟ್ ಕ್ಯಾಮೆರಾ ಇಟ್ಟು ಖಾಸಗಿ ವಿಡಿಯೋ, ಫೋಟೋ ಸೆರೆ
ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್ (Gym Trainer) ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮತಾಂತರಕ್ಕೆ ಒತ್ತಾಯಿಸಿ ಚಿತ್ರಹಿಂಸೆ, ಹಲ್ಲೆ ನಡೆಸಿ ಉಜ್ಬೇಕಿಸ್ತಾನದಲ್ಲಿ ಕೇರಳ ಮೂಲದ ವಿದ್ಯಾರ್ಥಿನಿ ಹತ್ಯೆ
ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಖಾಸಗಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹಿಂದೂ ಸಂಘಟನೆಗಳ ಮುಖಂಡರು ಹೊರಹಾಕಿದ್ದಾರೆ. ಈ ಕೃತ್ಯದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿವೆ ಎನ್ನಲಾಗಿದ್ದು, ಕೆಲ ಫೋಟೋಗಳು ಸಹ ವೈರಲ್ ಆಗಿವೆ.
ಬ್ಲ್ಯಾಕ್‌ಮೇಲ್‌ಗೆ ಹೆದರಿ ಪ್ರತಿಷ್ಠಿತ ಕುಟುಂಬದ ಮಹಿಳೆಯೋರ್ವರು ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಿಮ್ ಟ್ರೇನರ್ ಇಸ್ಮಾಯಿಲ್‌ನನ್ನು ಗಡಿಪಾರು ಮಾಡುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ನಿಮ್ಮ ಮೇಲೂ ಕ್ರಮ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂ ಮುಖಂಡರಿಗೆ ವಾರ್ನಿಂಗ್ ಕೊಟ್ಟಿರೋದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಮೊರಾಕ್ಕೋ ಸೋಲಿನ ಬೆನ್ನಲ್ಲೇ ಹಿಂಸಾಚಾರ; ಪ್ಯಾರಿಸ್, ಲಂಡನ್‌ನಲ್ಲಿ ಮುಸ್ಲಿಂ ವಲಸಿಗರ ಹುಚ್ಚಾಟ
