ಬೆಂಗಳೂರು: ನಕಲಿ ಫೇಸ್ ಬುಕ್ ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಪರ ನಿಂತಿದ್ದಾರೆ.
ಮೋಹಕ ತಾರೆ ರಮ್ಯಾ ಕಾಂಗ್ರೆಸ್‍ನಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಸಂಸದರಾಗಲು ಒಳ್ಳೆಯ ಕೆಲಸ ಮಾಡಿದ್ದಾರೆ. ಇದೆಲ್ಲ ಸೃಷ್ಟಿ, ಆ ವಿಡಿಯೋನೇ ಸುಳ್ಳು ಅಂತ ಆಂಜನೇಯ ಹೇಳಿದ್ದಾರೆ. ಇದನ್ನೂ ಓದಿ: ಫೇಕ್ ಖಾತೆ ಹೊಂದಿದ್ರೆ ತಪ್ಪಲ್ಲ : ರಮ್ಯಾ ಮೇಡಂ ಪಾಠದ ವಿಡಿಯೋ ಫುಲ್ ವೈರಲ್
Advertisement
Advertisement
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವಹೇಳನಕಾರಿ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರ ವಿರುದ್ಧ ಮಾತಾಡಿ ಸಾಕಾಗಿದೆ. ಬಿಜೆಪಿ ನಡೆಯೇ ಹಾಗೇ. ನನ್ನ ಬಾಯಲ್ಲಿ ಆ ರೀತಿ ಮಾತು ಬರಲ್ಲ. ರಮ್ಯಾ ಬೆಳವಣಿಗೆ ಸಹಿಸದೇ ಈ ಷಡ್ಯಂತ್ರ ರೂಪಿಸಿದ್ದಾರೆ. ಅವರು ನಮ್ಮ ಸಾಮಾಜಿಕ ಜಾಲತಾಣ ಬಲಪಡಿಸಲಿ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಫೇಕ್ ಅಕೌಂಟ್ ಪಾಠದ ವಿಡಿಯೋ ಬಗ್ಗೆ ರಮ್ಯಾ ಮೇಡಂ ಹೀಗಂದ್ರು
Advertisement
Advertisement
ಏನದು ಫೇಕ್ ಅಕೌಂಟ್ ಪಾಠ?: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮ್ಯಾ ಕಳೆದ ವಾರ ನಕಲಿ ಖಾತೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪಾಠ ಮಾಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ಫೇಸ್‍ಬುಕ್ ಫೇಕ್ ಅಕೌಂಟ್ ಬಗ್ಗೆ ಕೇಳಿದ ಪ್ರಶ್ನೆಗೆ ರಮ್ಯಾ, ಒಬ್ಬರಿಗೆ ಮೂರು ನಾಲ್ಕು ಅಕೌಂಟ್ ಗಳಿದ್ದರೆ ತಪ್ಪೇನಿಲ್ಲ. ಆದರೆ ಫೇಕ್ ಅಕೌಂಟ್ ಅಂದ್ರೆ ರೋಬಾಟ್ಸ್ ಅದು ಮಷೀನ್, ಮನುಷ್ಯ ಅಲ್ಲ. ಆದ್ರೆ ಒಬ್ಬರಿಗೆ ಹಲವು ಅಕೌಂಟ್ ಇದ್ರೆ ತಪ್ಪಿಲ್ಲ ಎಂದು ಉತ್ತರಿಸಿದ್ದರು. ಇದನ್ನೂ ಓದಿ: ಮುಗಿಯದ ರಮ್ಯಾ-ಜಗ್ಗೇಶ್ ಟ್ವೀಟ್ ಜಗಳ – ಫೇಕ್ ಪಾಠ ಹಿಡಿದು ಜಗ್ಗಾಡಿದ ನಟ
ಈ ಪಾಠದ ವಿಡಿಯೋ ವೈರಲ್ ಆಗಿದ್ದೆ ತಡ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಮಾನಿಗಳು ನಕಲಿ ಖಾತೆಗಳಿಗೆ ರಮ್ಯಾ ಕುಮ್ಮಕ್ಕು ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
https://www.youtube.com/watch?v=FPbeaJ04p7o